ಪ್ರಧಾನಿ ಮೋದಿಯನ್ನು ಅದ್ದೂರಿಯಾಗಿ ಸ್ವಾಗತಿಸಿದ ಯುಎಇ ಅಧ್ಯಕ್ಷ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಯುಎಇ ಹಾಗೂ ಖತಾರ್‌ಗೆ ಭೇಟಿ ನೀಡಿರುವ ಪ್ರಧಾನಿ ಮೋದಿಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ.

ಯುಎಇ ಅಧ್ಯಕ್ಷ ಶೇಕ್ ಮೊಹಮ್ಮದ್ ಬಿನ್ ಝ್ಯಾಯದ್ ಅಲ್ ನಹ್ಯಾನ್ ಮೋದಿಯನ್ನು ಆತ್ಮೀಯವಾಗಿ ಆಲಿಂಗಿಸಿ ಬರಮಾಡಿಕೊಂಡಿದ್ದಾರೆ. ಬಳಿಕ ಮೋದಿಗೆ ಗಾರ್ಡ್ ಆಫ್ ಹಾನರ್ ಗೌರವ ನೀಡಲಾಗಿದೆ.

ದ್ವಿಪಕ್ಷೀಯ ಮಾತುಕತೆ, ವಿಶ್ವ ಸರ್ಕಾರಿ ಶೃಂಗಸಭೆ, ಭವ್ಯ ಹಿಂದೂ ದೇಗುಲ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮಗಳ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಯುಎಇ ಹಾಗೂ ಖತಾರ್‌ಗೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ.

ಫೆಬ್ರವರಿ 13 ಹಾಗೂ 14 ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಹಾಗೂ 14, 15ರಂದು ಕತಾರ್ ಭೇಟಿ ನೀಡುತ್ತಿದ್ದಾರೆ. ದೆಹಲಿಯಿಂದ ಯುಎಇಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಅಧ್ಯಕ್ಷ ಶೇಕ್ ಮೊಹಮ್ಮದ್ ಸ್ವಾಗತಿಸಿದ್ದಾರೆ.

ಶೇಕ್ ಮೊಹಮ್ಮದ್ ಜೊತೆ ಭಾರತ ಹಾಗೂ ಯುಎಐ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯುವ ಕುರಿತು ಚರ್ಚೆ ನಡೆಸಲಿದ್ದಾರೆ. ಇನ್ನು ಫೆ 14 ರಂದು ದುಬೈನಲ್ಲಿ ನಡೆಯಲಿರುವ ವಿಶ್ವ ಸರ್ಕಾರಿ ಶೃಂಗಸಭೆಯಲ್ಲಿ ವಿಶ್ವ ನಾಯಕರ ಸಭೆಯನ್ನುದ್ದೇಶಿ ಮೋದಿ ಮಾತನಾಡಲಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಯು.ಎ.ಇ.ಯ ಪ್ರಧಾನಮಂತ್ರಿ ಹಿಸ್ ಹೈನೆಸ್ ಶೇಖ್ ಮೊಹಮ್ಮದ್ ಬಿನ್ ರಶೀದ್ ಅವರ ಜೊತೆಗೆ ಮೋದಿ ಚರ್ಚೆ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಯುನೈಟೆಡ್ ಅರಬ್‌ ಎಮಿರೇಟ್ಸ್‌ (ಯುಎಇ) ನಲ್ಲಿ ನಿರ್ಮಾಣಗೊಂಡಿರುವ ದೇಶದ ಮೊದಲ ಹಿಂದೂ ದೇವಸ್ಥಾನವನ್ನು ಉದ್ಘಾಟಿಸಲಿದ್ದಾರೆ. ಮಾರ್ಚ್ 1 ರಿಂದ ಈ ಮಂದಿರ ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!