September 27, 2026
Sunday, September 27, 2026
spot_img

ಭಾರತದ ಆಕಾಶ್​ತೀರ್ ಡಿಫೆನ್ಸ್ ಸಿಸ್ಟಂ- ಬ್ರಹ್ಮೋಸ್ ಕ್ಷಿಪಣಿ ಖರೀದಿಗೆ ಮುಂದಾದ ಯುಎಇ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಧ್ಯಪ್ರಾಚ್ಯ ಪ್ರದೇಶಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಯುನೈಟೆಡ್‌ ಅರಬ್‌ ಎಮಿರೈಟ್ಸ್‌ ಭಾರತದ ಅತ್ಯಾಧುನಿಕ ರಕ್ಷಣಾ ವ್ಯವಸ್ಥೆಯಾದ ಬ್ರಹ್ಮೋಸ್‌ ಸೂಪರ್‌ಸಾನಿಕ್ ಕ್ರೂಸ್ ಮಿಸೈಲ್ ಮತ್ತು ‘ಆಕಾಶತೀರ್’ ಏರ್ ಡಿಫೆನ್ಸ್ ಸಿಸ್ಟಮ್ ಖರೀದಿಸಲು ಆಸಕ್ತಿ ವ್ಯಕ್ತಪಡಿಸಿದೆ ಎನ್ನಲಾಗಿದೆ.

ಭಾರತ ಮತ್ತು ಯುಎಇ ನಡುವೆ ಈ ಪ್ರಮುಖ ಶಸ್ತ್ರಾಸ್ತ್ರಗಳ ರಫ್ತು ಕುರಿತು ಆರಂಭಿಕ ಹಂತದ ಮಾತುಕತೆಗಳು ನಡೆಯುತ್ತಿದ್ದು, ಅವು ಅತ್ಯಂತ ವೇಗವಾಗಿ ಮುನ್ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಇತ್ತೀಚಿನ ಸಂಘರ್ಷಗಳ ನಂತರ ಯುಎಇ ತನ್ನ ಭದ್ರತಾ ವ್ಯವಸ್ಥೆಯನ್ನು ಮರುಪರಿಶೀಲಿಸುತ್ತಿದೆ. ವಿಶೇಷವಾಗಿ ಡ್ರೋನ್ ದಾಳಿಗಳು ಮತ್ತು ಕ್ಷಿಪಣಿ ಬೆದರಿಕೆಗಳನ್ನು ಎದುರಿಸಲು ಹಾಗೂ ಜಾಗತಿಕ ಇಂಧನ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಭದ್ರತೆಯನ್ನು ಬಲಪಡಿಸಲು ಯುಎಇ ಮುಂದಾಗಿದೆ.

Must Read