ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ 6 ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಪದವಿ, ಡಿಪ್ಲೋಮಾ, ಬಿ.ಎಸ್ಸಿ, ಬಿ.ಟೆಕ್ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ
21,000/- ರಿಂದ 25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ನವೆಂಬರ್ 22,2023ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.