ಊಬರ್‌ನಿಂದ ಬೆಂಗಳೂರಿನಲ್ಲಿ ಮಹಿಳೆಯರಿಗೆ ಬೈಕ್ ಟ್ಯಾಕ್ಸಿ ಸೇವೆ ಬಿಡುಗಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉಬರ್ ಸಂಸ್ಥೆಯು ಉಬರ್ ಮೋಟೋ ವುಮೆನ್ ಸೇವೆಯನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದು, ಬೈಕ್ ಟ್ಯಾಕ್ಸಿಗಳನ್ನು ಮಹಿಳೆಯರೇ ನಿರ್ವಹಿಸುವ ಮೊದಲ ಮಾದರಿಯ ಸೇವೆಯಾಗಿದೆ. ಮಹಿಳೆಯರಿಗೆ ಮಾತ್ರ ಈ ಸೇವೆಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಕಂಪೆನಿಯು 250 ಮಹಿಳಾ ರೈಡರ್‌ಗಳಿಗೆ ಆರಂಭದಲ್ಲಿ ಸೇವೆಯನ್ನು ಪ್ರಾರಂಭಿಸಿದ್ದು, ಮುಂಬರುವ ದಿನಗಳಲ್ಲಿ ಸಂಖ್ಯೆಯನ್ನು ಹೆಚ್ಚಿಸುವುದಾಗಿ ಮತ್ತು ಇತರ ನಗರಗಳಿಗೆ ವಿಸ್ತರಿಸುವುದಾಗಿ ತಿಳಿಸಿದೆ.

ಆನ್-ಡಿಮಾಂಡ್ ದ್ವಿಚಕ್ರ ವಾಹನ ಸವಾರಿ ಸೇವೆಯು ಮಹಿಳಾ ಸವಾರರೊಂದಿಗೆ ಮಹಿಳಾ ಗ್ರಾಹಕರನ್ನು ಸಂಪರ್ಕಿಸುತ್ತದೆ. ಮಹಿಳಾ ಸುರಕ್ಷತೆ ಮತ್ತು ಚಲನಶೀಲತೆಯ ಅಗತ್ಯಗಳನ್ನು ಪರಿಹರಿಸಲು ವಿನ್ಯಾಸಗೊಳಿಸಲಾಗಿದೆ.

ಉಬರ್ ಮೋಟೋ ವುಮೆನ್ ಸುರಕ್ಷಿತ, ಕೈಗೆಟುಕುವ ಮತ್ತು ಅನುಕೂಲಕರ ಪ್ರಯಾಣದ ಆಯ್ಕೆಯನ್ನು ಮಹಿಳಾ ಗ್ರಾಹಕರಿಗೆ ನೀಡುತ್ತದೆ ಎಂದು ಉಬರ್ ಇಂಡಿಯಾ ಮತ್ತು ದಕ್ಷಿಣ ಏಷ್ಯಾದ ಪ್ರಾದೇಶಿಕ ವ್ಯಾಪಾರ ಕಾರ್ಯಾಚರಣೆಗಳ ಮುಖ್ಯಸ್ಥ ಅಭಿಷೇಕ್ ಪಾಧ್ಯೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!