ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಯುಸಿಸಿ ಮಸೂದೆ ಮಂಡನೆ: ಉತ್ತರಾಖಂಡ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ (Uniform Civil Code) ಮಸೂದೆಯನ್ನು ಮಂಡಿಸಲಾಗುವುದು ಎಂದು ಉತ್ತರಾಖಂಡದ (Uttarakhand) ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami ) ಹೇಳಿದ್ದಾರೆ.

ಯುಸಿಸಿ ಮಸೂದೆಯನ್ನು ಸಿದ್ಧಪಡಿಸಲು ರಚಿಸಲಾದ ಸಮಿತಿಯು ಫೆಬ್ರವರಿ 2 ರಂದು ರಾಜ್ಯ ಸರ್ಕಾರಕ್ಕೆ ತನ್ನ ಕರಡನ್ನು ಸಲ್ಲಿಸಲಿದೆ. ಹೀಗಾಗಿ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದರು.

ಈ ಬಗ್ಗೆ ಎಕ್ಸ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ `ಏಕ್ ಭಾರತ್, ಶ್ರೇಷ್ಠ ಭಾರತ್’ ಯೋಜನೆಯ ಭಾಗವಾಗಿ ರಾಜ್ಯದಲ್ಲಿ ಯುಸಿಸಿಯನ್ನು ಜಾರಿಗೆ ತರಲು ನಮ್ಮ ಸರ್ಕಾರ ಯಾವಾಗಲೂ ಬದ್ಧವಾಗಿದೆ ಎಂದು ಪೋಸ್ಟ್‍ನಲ್ಲಿ ಬರೆದುಕೊಂಡಿದ್ದಾರೆ.

ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಯುಸಿಸಿ ಸಮಿತಿಯ ಅವಧಿಯು ಜನವರಿ 26 ರಂದು ಕೊನೆಗೊಂಡಿದೆ. ಸಮಿತಿಯ ಅವಧಿಯನ್ನು ಈಗಾಗಲೇ ಮೂರು ಬಾರಿ ವಿಸ್ತರಿಸಲಾಗಿದೆ. ಫೆಬ್ರವರಿ 2 ರಂದು ತನ್ನ ಅಂತಿಮ ವರದಿಯನ್ನು ಸರ್ಕಾರಕ್ಕೆ ಹಸ್ತಾಂತರ ಮಾಡಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!