Wednesday, October 5, 2022

Latest Posts

ಸುಪ್ರಿಂಕೋರ್ಟ್ ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸುಪ್ರಿಂಕೋರ್ಟ್ ನ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ನೇಮಕಗೊಂಡಿದ್ದಾರೆ .

ಕಳೆದ ವಾರಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಲಲಿತ್ ಅವರ ಹೆಸರನ್ನು ಶಿಫಾರಸು ಮಾಡಿದ್ದರು.

ನ್ಯಾಯಮೂರ್ತಿ ರಮಣ ಅವರು ಆಗಸ್ಟ್ 26 ರಂದು ತಮ್ಮ ಅಧಿಕಾರದಿಂದ ನಿವೃತ್ತಿಯಾಗಲಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರುವ ನ್ಯಾಯಮೂರ್ತಿ ಯುಯು ಲಲಿತ್ ಅವರನ್ನು ನೇರವಾಗಿ ಬಾರ್‌ನಿಂದ ಸುಪ್ರೀಂ ಕೋರ್ಟ್‌ಗೆ ನೇಮಿಸಲಾಯಿತು. ಸುಪ್ರೀಂ ಕೋರ್ಟ್​ನ ಅತ್ಯಂತ ಹಿರಿಯ ನ್ಯಾಯಮೂರ್ತಿಗಳಲ್ಲಿ ಒಬ್ಬರಾಗಿರುವ ಯು.ಬಿ.ಲಲಿತ್​​​ ನವೆಂಬರ್​ 8ರಂದು ನಿವೃತ್ತಿಯಾಗಲಿದ್ದಾರೆ. ಹೀಗಾಗಿ ಇವರ ಅಧಿಕಾರವಧಿ ಮೂರು ತಿಂಗಳು ಮಾತ್ರ ಇರಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!