ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಉದಯಗಿರಿ ಪೊಲೀಸ್ ಠಾಣೆ ದಾಂಧಲೆ ಪ್ರಕರಣ ಸಂಬಂಧ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.
2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದ್ದು, ಆರೋಪಿಯನ್ನು ಸಿಸಿಬಿ ಪೊಲೀಸರು ಮೈಸೂರು ಜೈಲಿನತ್ತ ಕರೆದೊಯ್ದಿದ್ದಾರೆ.
ಫೆ. 10ರಂದು ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿತ್ತು. ಇದಕ್ಕೂ ಮುನ್ನ ಆರೋಪಿ ಮೌಲ್ವಿ ಮುಫ್ತಿ ಮಕ್ಬೋಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು.
ಪ್ರಕರಣ ನಡೆದ 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.