ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರಿನ ಉದಯಗಿರಿ ಠಾಣೆ ಮೇಲೆ ನಡೆದ ಕಲ್ಲು ತೂರಾಟದ ಪ್ರಕರಣ ಸಂಬಂಧ ಮೌಲ್ವಿ ಮುಫ್ತಿ ಮುಸ್ತಾಕ್ನನ್ನು ಪೊಲೀಸರು ಕಡೆಗೂ ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಪೋಸ್ಟ್‌ನಿಂದಾಗಿ ಗಲಭೆ ಸೃಷ್ಟಿಯಾಗಿ ಪೊಲೀಸ್ ಠಾಣೆ ಮೇಲೆ ಕಲ್ಲುತೂರಾಟ ನಡೆದಿತ್ತು. ಈ ಕೃತ್ಯಕ್ಕೆ ಮೌಲ್ವಿ ಪ್ರಚೋದನೆ ನೀಡಿದ್ದ ಎಂದು ಆರೋಪಿಸಲಾಗಿದೆ.
ಆರೋಪಿ ಮೌಲ್ವಿಯನ್ನು ಬಂಧಿಸುವ ವಿಚಾರದಲ್ಲಿ ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಒತ್ತಡ ಹೆಚ್ಚಾಗಿತ್ತು. ಇದೀಗ ಆತನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.