ಉದಯಗಿರಿ ಗಲಭೆ ಪ್ರಕರಣ: ಎಂಟು ಆರೋಪಿಗಳ ಅರೆಸ್ಟ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು ನಗರದ ಉದಯಗಿರಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಮೊನ್ನೆ ರಾತ್ರಿ ಭುಗಿಲೆದ್ದ ಗಲಭೆ ಸಂಬಂಧ ಸಿಸಿಬಿ ಪೊಲೀಸರು 8 ಮಂದಿ ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ.

ಮೈಸೂರಿನ ಶಾಂತಿನಗರದ ಸುಹೇಲ್@ಸೈಯದ್ ಸುಹೇಲ್, ರಹೀಲ್ ಪಾಷಾ, ಅಯಾನ್, ಸತ್ಯನಗರದ ನಿವಾಸಿ ಏಜಾಜ್, ಮೈಸೂರಿನ ಗೌಸಿಯಾನಗರದ ನಿವಾಸಿ ಸೈಯದ್ ಸಾದಿಕ್, ರಾಜೀವ್​ ನಗರದ ಸಾದಿಕ್ ಪಾಷಾ ಅಲಿಯಾಸ್ ಸಾದಿಕ್, ಅರ್ಬಾಜ್ ಷರೀಫ್, ಶೋಹೆಬ್ ಪಾಷಾ ಬಂಧಿತ ಆರೋಪಿಗಳು. ಮತ್ತಷ್ಟು ಆರೋಪಿಗಳ ಸೆರೆಗೆ ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ.

ಉದಯಗಿರಿ ಠಾಣೆ ರಸ್ತೆಯಲ್ಲಿನ 10ಕ್ಕೂ ಹೆಚ್ಚು ಸಿಸಿಕ್ಯಾಮರಾ ಡಿವಿಆರ್ ವಶಕ್ಕೆ ಪಡೆದು ಪರಿಶೀಲನೆ ಮಾಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!