CINEMA| ಇನ್ಮುಂದೆ ಸಿನಿಮಾದಲ್ಲಿ ನಟಿಸುವುದಿಲ್ಲ ಎಂದ ಸ್ಟಾರ್‌ ನಟ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ನಾಯಕನಾಗಿ ಹಲವು ಚಿತ್ರಗಳನ್ನು ನಿರ್ಮಿಸಿದ್ದರು. ಕಳೆದ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಸ್ಪರ್ಧಿಸಿ ಶಾಸಕರಾಗಿ ಗೆದ್ದರು. ಎಂಎಲ್ಎ ಆದ ನಂತರವೂ ಹಲವು ಸಿನಿಮಾಗಳನ್ನು ಮಾಡಿದ್ದಾರೆ. ಆದರೆ ಇತ್ತೀಚೆಗೆ ಉದಯನಿಧಿ ಸ್ಟಾಲಿನ್ ಯುವಜನ ಕಲ್ಯಾಣ ಮತ್ತು ಕ್ರೀಡಾ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಮಂತ್ರಿಯಾದ ನಂತರ ಯಾವ ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ.

ಉದಯನಿಧಿ ಸ್ಟಾಲಿನ್ ಅವರ ಇತ್ತೀಚಿನ ಚಿತ್ರ ಮಾಮನ್ನನ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಚೆನ್ನೈನಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಕಮಲ್ ಹಾಸನ್ ಮುಖ್ಯ ಅತಿಥಿಯಾಗಿದ್ದು, ಈ ಚಿತ್ರದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಉದಯನಿಧಿ ಸ್ಟಾಲಿನ್ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ʻಇನ್ನು ಮುಂದೆ ಸಿನಿಮಾ ಮಾಡುವುದಿಲ್ಲʼ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಮಾಮನ್ನನ್ ನನ್ನ ಕೊನೆಯ ಚಿತ್ರವಾಗಿರುವುದು ಖುಷಿ ತಂದಿದೆ. ಕಮಲ್ ಹಾಸನ್ ಅವರ ನಿರ್ಮಾಣದಲ್ಲಿ ಸಿನಿಮಾ ಮಾಡುವ ಆಸೆ ಇದೆ. ಆದರೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಸಿನಿಮಾಗಳಲ್ಲಿ ನಟಿಸುವುದು ಸೂಕ್ತವಲ್ಲ ಎಂದು ನನ್ನ ಅಭಿಪ್ರಾಯ. ಹಾಗಾಗಿ ಸಿನಿಮಾ ನಿಲ್ಲಿಸುತ್ತಿದ್ದೇನೆ. ಉದಯನಿಧಿ ಸ್ಟಾಲಿನ್ ಅವರ ಕಾಮೆಂಟ್ ವೈರಲ್ ಆಗಿದ್ದು, ಅವರ ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!