Sunday, August 14, 2022

Latest Posts

ಸಿಎಂ ಸ್ಥಾನಕ್ಕೆ ಉದ್ಧವ್​​ ಠಾಕ್ರೆ ರಾಜೀನಾಮೆ: ಬಿಜೆಪಿ, ಏಕನಾಥ್‌ ಶಿಂಧೆ ಬಣದಿಂದ ಸಂಭ್ರಮಾಚರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್​​ ಠಾಕ್ರೆ ರಾಜೀನಾಮೆ ನೀಡಿದ್ದ ಬೆನ್ನೆಲ್ಲೇ ಗೋವಾದ ಖಾಸಗಿ ಹೋಟೆಲ್‌ನಲ್ಲಿದ್ದ ಏಕನಾಥ್‌ ಶಿಂಧೆ ಬಣದ ಶಾಸಕರು ಹಾಗೂ ಬಿಜೆಪಿ ಶಾಸಕರು ಸಂಭ್ರಮಾಚರಣೆ ಮಾಡಿದರು.
ಫೇಸ್​ಬುಕ್​ ಲೈವ್‌ನಲ್ಲಿ ತನ್ನ ನಿರ್ಧಾರ ಪ್ರಕಟಿಸಿದ ಠಾಕ್ರೆ , ಸಿಎಂ ಮತ್ತು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರ ಪತನವಾಗಿದೆ.
ಇದರಿಂದ ನಾಳೆ ನಡೆಯುವ ವಿಶ್ವಾಸಮತ ಯಾಚನೆ ರದ್ದಾಗಿದ್ದು, ಏಕನಾಥ್‌ ಶಿಂಧೆ ಬಣದ ಶಾಸಕರು ಹಾಗೂ ಬಿಜೆಪಿ ಶಾಸಕರು ಸಂಭ್ರಮಾಚರಣೆ ಮಾಡಿದರು.
ಬಿಜೆಪಿ ಶಾಸಕರು ದೇವೇಂದ್ರ ಫಡ್ನವಿಸ್‌ಗೆ ಘೋಷಣೆ ಕೂಗಿ ಸಂಭ್ರಮಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss