October 15, 2026
Thursday, October 15, 2026
spot_img

ಕೇರಳದಲ್ಲಿ ಯುಡಿಎಫ್ ಭರ್ಜರಿ ವೇಗ: ಮುಂದಿನ ಸಿಎಂ ಯಾರು? ಶಶಿ ತರೂರ್ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದ್ದು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಸ್ಪಷ್ಟ ಬಹುಮತದತ್ತ ದಾಪುಗಾಲು ಹಾಕುತ್ತಿದೆ. ಸದ್ಯದ ಮಾಹಿತಿಯಂತೆ ಯುಡಿಎಫ್ 85ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ದಶಕದ ಬಳಿಕ ಮರಳಿ ಅಧಿಕಾರ ಹಿಡಿಯುವ ಉತ್ಸಾಹದಲ್ಲಿದೆ.

ಈ ಸಂಭ್ರಮದ ನಡುವೆಯೇ ರಾಜ್ಯದ ಮುಂದಿನ ‘ಮುಖ್ಯಮಂತ್ರಿ’ ಯಾರು ಎಂಬ ಚರ್ಚೆ ಜೋರಾಗಿದೆ. ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಂಸದ ಶಶಿ ತರೂರ್, “ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ನನಗಾಗಲಿ ಅಥವಾ ಇತರರಿಗಾಗಲಿ ಸದ್ಯಕ್ಕೆ ಯಾವುದೇ ಸುಳಿವು ಇಲ್ಲ,” ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಮುಖ್ಯಮಂತ್ರಿ ಆಯ್ಕೆಯು ಪ್ರಜಾಪ್ರಭುತ್ವದ ಮಾದರಿಯಲ್ಲಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದ ಅವರು, ಈ ಕೆಳಗಿನ ಹಂತಗಳನ್ನು ವಿವರಿಸಿದ್ದಾರೆ:

ಮೊದಲು ಚುನಾವಣೆಯಲ್ಲಿ ಗೆದ್ದ ಎಲ್ಲಾ ಶಾಸಕರ ಜೊತೆ ಪಕ್ಷದ ಅಧ್ಯಕ್ಷರು ಮತ್ತು ವೀಕ್ಷಕರು ಸಮಾಲೋಚನೆ ನಡೆಸಲಿದ್ದಾರೆ. ಶಾಸಕರ ಅಭಿಪ್ರಾಯವನ್ನು ಆಧರಿಸಿ ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಮುಖ್ಯಮಂತ್ರಿ ಹೆಸರನ್ನು ಘೋಷಿಸಲಿದೆ.

ಸದ್ಯಕ್ಕೆ ಪಕ್ಷದ ಗಮನವು ಸಂಪೂರ್ಣವಾಗಿ ಫಲಿತಾಂಶ ಮತ್ತು ಮೈತ್ರಿಕೂಟದ ಗೆಲುವಿನ ಮೇಲಿದೆ ಎಂದು ಅವರು ತಿಳಿಸಿದ್ದಾರೆ.

Must Read