Friday, December 8, 2023

Latest Posts

ಸನಾತನ ಧರ್ಮದ ವಿರುದ್ಧ ಹೇಳಿಕೆ ಬೆನ್ನಲ್ಲೇ ರಾಷ್ಟ್ರಪತಿಯವರ ಬಗ್ಗೆ ಪ್ರಶ್ನೆಯೆತ್ತಿದ ಉದಯನಿಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸನಾತನ ಧರ್ಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ ವಿರೋಧ ಎದುರಿಸುತ್ತಿರುವ ತಮಿಳುನಾಡು ಸರ್ಕಾರದ ಸಚಿವ ಉದಯನಿಧಿ ಸ್ಟಾಲಿನ್ ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಸನಾತನ ಧರ್ವವನ್ನು ವಿರೋಧಿಸುತ್ತಲೇ ಸ್ಟಾಲಿನ್ ತಮ್ಮ ಪಕ್ಷದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆಯೂ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ಮಾತುಗಳನ್ನಾಡಿದ್ದಾರೆ. ಹೊಸ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಯವರನ್ನೇಕೆ ಕರೆಸಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ʻದ್ರೌಪದಿ ಮುರ್ಮು ವಿಧವೆ ಮತ್ತು ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಈ ರೀತಿ ತಾರತಮ್ಯ ಮಾಡುವುದು ಸರಿಯೇʼ? ಎಂದು ಪ್ರಶ್ನಿಸಿದರು.

ಕಟ್ಟಡ ಉದ್ಘಾಟನೆ ದಿನದಂದು ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಧನಖರ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತಿತರರು ಉಪಸ್ಥಿತರಿದ್ದರು. ಆದರೆ, ದ್ರೌಪದಿ ಮುರ್ಮು ಅವರು ಸಮಾರಂಭದಲ್ಲಿ ಕಾಣಿಸಿಕೊಂಡಿರಲಿಲ್ಲ ಎಂಬ ಮಾತುಗಳನ್ನಾಡಿ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ವಿವಾದದ ಕಿಡಿ ಹೊತ್ತಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!