ಹೊಸದಿಗಂತ ಡಿಜಿಟಲ್ ಡೆಸ್ಕ್:
ಡ್ರಗ್ಸ್ ಹಾವಳಿ ವಿರುದ್ಧ ನಮ್ಮ ಸರ್ಕಾರ ಸಮರ ಸಾರಿದ್ದು, ಯಾವುದೇ ಕಾರಣಕ್ಕೂ ರಾಜ್ಯವನ್ನು “ಉಡ್ತಾ ಪಂಜಾಬ್’ನಂತೆ “ಉಡ್ತಾ ಕರ್ನಾಟಕ’ ಆಗಲು ಬಿಡುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪುನರುಚ್ಚರಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಡಾ.ಧನಂಜಯ ಸರ್ಜಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸುಮಾರು 150 ಕೋಟಿ ರೂ. ಮೌಲ್ಯದ 10 ಟನ್ ಡ್ರಗ್ಸ್‌ಗೆ ಹಾಗೂ 250 ಕೆಜಿಯಷ್ಟು ಸಿಂಥೆಟಿಕ್ ಡ್ರಗ್ಸ್ ಅನ್ನು ಸುಟ್ಟು ಹಾಕಲಾಗಿದೆ. ವಿದೇಶದಿಂದ ವಿದ್ಯಾರ್ಥಿ ವೀಸಾದ ಮೇಲೆ ಬಂದವರು ದಂಧೆಗೆ ಇಳಿಯುತ್ತಿದ್ದು, ಅಂಥ 150 ಮಂದಿಯನ್ನು ಬಂಧಿಸಿ ವಾಪಸ್ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ ಮಾಡುವ ಪೆಡ್ಲರ್‌ಗಳ ಮೇಲೆ ಕ್ರಮ ತೆಗೆದುಕೊಳ್ಳುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯ ಕುರಿತು ವಿದ್ಯಾರ್ಥಿಗಳಿಗಾಗಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದಿದ್ದಾರೆ.