ಹೊಸದಿಗಂತ ವರದಿ ಬೆಂಗಳೂರು:
ಜನ ಸಂಘದ ಹಿರಿಯ ನಾಯಕ, ಉಡುಪಿ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಕಟ್ಟಿ ಬೆಳೆಸಿದ್ದ ಉಡುಪಿ ಪುರಸಭೆ ಮಾಜಿ ಅಧ್ಯಕ್ಷರಾದ ಮಲ್ಪೆ ಸೋಮಶೇಖರ ಭಟ್ ಅವರ ನಿಧನ ಅತ್ಯಂತ ನೋವು ತಂದಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಡಾ. ವಿ.ಎಸ್ ಆಚಾರ್ಯರ ರಾಜಕೀಯ ಗುರುಗಳಾಗಿದ್ದ ಅವರನ್ನು ಉಡುಪಿ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಭೀಷ್ಮ ಎಂದು ಕರೆಯಲಾಗುತ್ತಿತ್ತು. ಹಿರಿಯ ಉದ್ಯಮಿ, ಹಲವು ಧಾರ್ಮಿಕ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಕೊಡುಗೈದಾನಿಗಳಾಗಿದ್ದ ಅವರ ನಿಧನ ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ.
ಅವರ ಅಗಲುವಿಕೆಯಿಂದ ಒಬ್ಬ ಹಿರಿಯ ಮಾರ್ಗದರ್ಶಕರನ್ನು ಕಳಕೊಂಡಂತಾಗಿದೆ. ಮೃತರ ಕುಟುಂಬ, ಬಂಧು ಮಿತ್ರರಿಗೆ ದೇವರು ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ; ಅಲ್ಲದೆ ಅವರಿಗೆ ಚಿರಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.