ಉಡುಪಿ ಜೋಡಿಕೊಲೆ ಪ್ರಕರಣ: ಆರೋಪಿ ಸೆರೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್  

ಜಿಲ್ಲೆಯನ್ನು ಸಂಚಲನ ಮೂಡಿಸಿದ್ದ ಹತ್ತು ವರ್ಷದ ಹೆಣ್ಣು ಮಗಳು ಮತ್ತು ತಾಯಿಯನ್ನು ಕೊಲೆಗೈದ ಆರೋಪಿಯನ್ನು 48 ಗಂಟೆಯೊಳಗೆ ಪೋಲಿಸರು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿ ಹರೀಶ್ ಯಾನೆ ಗಣೇಶ್(29) ಬಂಧಿತ ಆರೋಪಿ. ಆರೋಪಿಯು ಮೃತ ಚೆಲುವಿಯ ದೂರದ ಸಂಬಂಧಿಯಾಗಿದ್ದು, ಈತನಿಗೆ ಮದುವೆಯಾಗಿ ಇಬ್ಬರು ಮಕ್ಕಳಿರುತ್ತಾರೆ. ಗಂಡನಿಂದ ದೂರವಾಗಿರುವ ಚೆಲುವಿಯನ್ನು ಉಪಯೋಗಿಸಿಕೊಂಡು ಆಕೆಯ ಮನೆಗೆ ಆಗಾಗ್ಗೆ ಬಂದು ಹೋಗುತ್ತಿದ್ದು ಚೆಲುವಿಯನ್ನು ಮದುವೆ ಆಗಬೇಕೆಂದು ಒತ್ತಾಯಿಸುತ್ತಿದ್ದನು.

ಚೆಲುವಿಯು ಬೇರೆ ಗಂಡಸರೊಂದಿಗೆ ಪೋನ್‌‌ನಲ್ಲಿ ಮಾತನಾಡುತ್ತಿದ್ದಾಳೆ ಎಂಬುದಾಗಿ ಸಂಶಯದಿಂದ ದ್ವೇಷಗೊಂಡು ಮೇ 08 ರಂದು ರಾತ್ರಿ ಅವಳ ಮನೆಗೆ ತೆರಳಿ ಊಟ ಮಾಡಿ ಮಗಳು ಮಲಗಿದ ಬಳಿಕ ಚೆಲುವಿ ಬೇರೆಯವರೊಂದಿಗೆ ಪೋನಿನಲ್ಲಿ ಸಂಪರ್ಕದಲ್ಲಿರುವ ವಿಚಾರದಲ್ಲಿ ತಗಾದೆ ತೆಗೆದು ಗಲಾಟೆ ಮಾಡಿದ್ದಾನೆ, ನಂತರ ಚೆಲುವಿ ಮಲಗಿದ್ದಾಗ ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದು ನಂತರ ನಿದ್ರೆಯಲ್ಲಿದ್ದ ಮಗಳು ತನ್ನ ವಿರುದ್ಧ ಸಾಕ್ಷಿ ಹೇಳಬಹುದೆಂದು ಅವಳನ್ನು ಕೂಡಾ ಶಾಲಿನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿರುತ್ತಾರೆ. ಕೊಲೆ ಮಾಡಿದ ನಂತರ ಚೆಲುವಿಯ ಕುತ್ತಿಗೆಯಲ್ಲಿದ್ದ ಸುಮಾರು 50,000/- ಮೌಲ್ಯದ ಚಿನ್ನದ ಸರ ಹಾಗೂ ಮೃತಳು ಉಪಯೋಗಿಸುತ್ತಿದ್ದ OPPO ಮೊಬೈಲ್‌‌‌ ಪೋನ್‌‌ನ್ನು ಸುಲಿಗೆ ಮಾಡಿಕೊಂಡು ಹೋಗಿರುತ್ತಾರೆ.

ಪ್ರಕರಣದ ತನಿಖಾಧಿಕಾರಿಯವರಾದ ಬ್ರಹ್ಮಾವರ ವೃತ್ತ ನಿರೀಕ್ಷಕರಾದ ಶ್ರೀ ಅನಂತ ಪದ್ಮನಾಭ ರವರ ನೇತೃತ್ವದಲ್ಲಿ ಪಿ.ಎಸ್.ಐ ರವರಾದ ಶ್ರೀ ಅನಿಲ್ ಬಿ ಮಾದರ, ಶ್ರೀ ಮಧು ಬಿ.ಇ, ಪ್ರೊಬೆಷನರಿ ಪಿ.ಎಸ್.ಐ ರವರಾದ ಶ್ರೀ ಮಂಜುನಾಥ ಮರಬದ & ಶ್ರೀ, ರವಿ ಬಿ ಕಾರಗಿ ಸಿಬ್ಬಂದಿಯವರಾದ ರಾಘವೇಂದ್ರ ಮತ್ತು ನಿತಿನ್‌ ರವರ ವಿಶೇಷ ತಂಡವು ಪ್ರಕರಣ ದಾಖಲಾಗಿ 48 ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!