spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶ್ರದ್ಧಾಂಜಲಿ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ,ಉಡುಪಿ:

ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಭಾರತೀಯ ಜನತಾ ಪಕ್ಷದ ಉಡುಪಿ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಾಸಕರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಆಸ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಉಡುಪಿ ಶಾಸಕ ಕೆ. ರಘುಪತಿ ಭಟ್ ನುಡಿನಮನ ಸಲ್ಲಿಸಿ, ನಮ್ಮ ವಿರೋಧ ಪಕ್ಷದವರಾದರೂ ಆಸ್ಕರ್ ಫೆರ್ನಾಂಡಿಸ್ ಉಡುಪಿಗೆ ನೀಡಿದ ಸೇವೆ ಸ್ಮರಿಸಬೇಕಾಗಿದೆ. ಇಂಥ ಸಂಸ್ಕೃತಿ ಉಡುಪಿ ಜಿಲ್ಲೆಯಲ್ಲಿ ಬಿಟ್ಟರೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ರಾಜಕೀಯ ಸಿದ್ಧಾಂತವನ್ನು ಬಿಡದೇ ಬೇರೆ ಪಕ್ಷದ ಹಿರಿಯರು ನಿಧನರಾದಾಗ ಅವರಿಗೆ ನಮ್ಮ ಪಕ್ಷದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸುವುದು ನಮ್ಮ ಕರ್ತವ್ಯ. ಕಾರ್ಮಿಕ ಸಂಘಟನೆಗಳಿಂದ ಬೆಳೆದ ನಾಯಕರಾದ ಆಸ್ಕರ್, ಯಾವತ್ತೂ ಹಗೆತನದ ರಾಜಕೀಯ ಮಾಡಿದವರಲ್ಲ. ಕಾಂಗ್ರೆಸ್ ಕಾರ್ಯಕರ್ತರು ಮಾಡಿದಾಗಲೂ ಆಸ್ಕರ್ ಅದನ್ನು ಬೆಂಬಲಿಸಿಲ್ಲ. ಡಾ.ಆಚಾರ್ಯ ಜೊತೆ ಆತ್ಮೀಯ ಸಂಬಂಧ ಹೊಂದಿದ್ದರು. ಅವರೊಬ್ಬ ಮಾನವೀಯ ಗುಣವಿದ್ದ ನಾಯಕ ಎಂದು ಗುಣಗಾನ ಮಾಡಿದರು‌.
ನನ್ನ ವೈಯಕ್ತಿಕ ಜೀವನದಲ್ಲಿ ದುರ್ಘಟನೆ ಆದಾಗ ಸಾಂತ್ವನ ಹೇಳಿದ್ದರು. ಕಾಂಗ್ರೆಸ್ ಪಕ್ಷದವರು ನನ್ನನ್ನು ಟೀಕಿಸಿದಾಗಲೂ ಮಾನವೀಯ ಗುಣ ತೋರಿದ್ದರು. ಮಾನಸಿಕ ವೇದನೆಯಲ್ಲಿದ್ದಾಗ ನನ್ನ ಬಳಿಗೇ ಬಂದು ಸಾಂತ್ವನ ಹೇಳಿ, ಸಹಾಯ ಬೇಕಾದರೆ ಕೇಳಿ ಎಂದಿದ್ದರು. ಅವರ ಸಹಾಯಕ್ಕಿಂತಲೂ ಸಾಂತ್ವನದಿಂದ ನಾನು ಹಗುರಾಗಿದ್ದೆ. ಅತ್ಯಂತ ಒಳ್ಳೆಯ ಗುಣ ಹೊಂದಿದ್ದರು. ಅದೇ ಕಾರಣಕ್ಕೆ ಬೆಂಗಳೂರಿಂದ ಬಂದು ಅಂತಿಮ ದರ್ಶನ‌ ಪಡೆದಿದ್ದೇನೆ ಎಂದು ಭಟ್ ಹೇಳಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಶ್ರದ್ಧಾಂಜಲಿ ಅರ್ಪಿಸಿ, ವಿರೋಧಿಗಳನ್ನು ಪ್ರೀತಿಸುವ ಗುಣ ಹೊಂದಿದ್ದರು. ಹಿಂದುತ್ವದ ವಿಶ್ವಾಸ ಮತ್ತು ಗೌರವವನ್ನು ಹೊಂದಿದ್ದರು. ಪಕ್ಷ ಮತ್ತು ನಾಯಕತ್ವದ ಮೇಲಿನ ನಿಷ್ಠೆಯನ್ನು ಆಸ್ಕರ್ ಅವರಿಂದ ಕಲಿಯಬೇಕು ಎಂದು ಹೇಳಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮರೆತು ಎಲ್ಲ ಪಕ್ಷಗಳು ಒಂದಾಗಿ ಕೆಲಸ ಮಾಡುವ ಸಂಪ್ರದಾಯವಿದ್ದರೆ ಅದು ಉಡುಪಿ ಜಿಲ್ಲೆಯಲ್ಲಿ ಮಾತ್ರ. ಉಡುಪಿ ನಗರಸಭೆ ಸದಸ್ಯರಾಗಿದ್ದಲ್ಲಿಂದ ಕೇಂದ್ರದಲ್ಲಿ ಸಚಿವರಾಗಿದ್ದು ನಮ್ಮ ಹೆಮ್ಮೆ. ಸುಮಾರು 41 ವರ್ಷಗಳ ಕಾಲ ಸಂಸತ್ತಿನಲ್ಲಿ ಉಡುಪಿಯನ್ನು ಪ್ರತಿನಿಧಿಸಿದ್ದರು. ಎಲ್ಲವನ್ನು ರಾಜಕೀಯವಾಗಿ ಕಂಡವರಲ್ಲ, ಅವರು ಎಐಸಿಸಿ ಕಾರ್ಯದರ್ಶಿಯಾಗಿದ್ದರೂ ಪರಿಚಯದವರು ಕಂಡರೆ ಅವರನ್ನು ಆತ್ಮೀಯವಾಗಿ ಮಾತಾಡಿಸುತ್ತಿದ್ದ ವಿಶಾಲ ಹೃದಯ ಹೊಂದಿದ್ದರು. ಅವರೊಬ್ಬ ದೂರದೃಷ್ಟಿವುಳ್ಳ ದಾರ್ಶನಿಕರು ಎಂದು ಬಣ್ಣಿಸಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ, ಬಿ. ರವಿ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಉಡುಪಿ ನಗರಸಭಾಧ್ಯಕ್ಷೆ ಸುಮಿತ್ರಾ ನಾಯಕ್ ಮೊದಲಾದವರಿದ್ದರು.
ಮುಂದುವರಿಯಿತು ಆಸ್ಕರ್ ಆರಂಭಿಸಿದ ಸಂಸ್ಕೃತಿ
ಪ್ರತಿಪಕ್ಷವಾದರೂ ಸಹೃದಯ ನಾಯಕ ನಿಧನರಾದಾಗ ಪಕ್ಷಬೇಧ ಮರೆತು ಅವರಿಗೆ ಪಕ್ಷದ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ಸಂಸ್ಕೃತಿಯನ್ನು ಉಡುಪಿಯಲ್ಲಿ ಆರಂಭಿಸಿದ್ದು ಆಸ್ಕರ್ ಫೆರ್ನಾಂಡಿಸ್. ಅಂದು ಡಾ. ವಿ.ಎಸ್. ಆಚಾರ್ಯರು ನಿಧನರಾದಾಗ ದಿಲ್ಲಿಯಲ್ಲಿದ್ದ ಆಸ್ಕರ್, ಕಾಂಗ್ರೆಸ್ ನಾಯಕರಿಗೆ ಕರೆ ಮಾಡಿ, ಕಾಂಗ್ರೆಸ್ ಭವನದಲ್ಲಿ ಡಾ. ಆಚಾರ್ಯರ ಭಾವಚಿತ್ರ ಇರಿಸಿ, ಶ್ರದ್ಧಾಂಜಲಿ ಸಲ್ಲಿಸುವಂತೆ ಸೂಚಿಸಿದ್ದರು. ಇಂದು ಆಸ್ಕರ್ ನಿಧನರಾದಾಗ ಸಚಿವ ಸುನೀಲ್ ಕುಮಾರ್ ಅವರು ಬಿಜೆಪಿ ನಾಯಕರಿಗೆ ಕರೆ ಮಾಡಿ, ಆಸ್ಕರ್ ಅವರಿಗೆ ಬಿಜೆಪಿ ಕಚೇರಿಯಲ್ಲಿ ಶ್ರದ್ಧಾಂಜಲಿ ಅರ್ಪಿಸಲು ಸೂಚಿಸಿದ್ದಾರೆ. ಅದರಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರದ್ಧಾಂಜಲಿ ಸಭೆ ನಡೆಸಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss