ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ.
ಈ ಬಗ್ಗೆರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದವರಾಗಿರುವ ಡಾ.ವಿದ್ಯಾಕುಮಾರಿ 2014ನೇ ಬ್ಯಾಚ್ ನ ಐಎಎಸ್ ಅಧಿಕಾರಿ.
ಕೂರ್ಮರಾವ್ ಅವರಿಗೆ ಸರಕಾರ ಸ್ಥಳವನ್ನು ಗುರುತಿಸಿಲ್ಲ.