March 28, 2026
Saturday, March 28, 2026
spot_img

ಉಡುಪಿಗೆ ಇಲ್ಲ ವೈದ್ಯಕೀಯ ಕಾಲೇಜು, ಮೀನುಗಾರರಿಗೂ ಇಲ್ಲ ಮನ್ನಣೆ; ಬಜೆಟ್ ವಿರುದ್ಧ ಸುನೀಲ್ ಕುಮಾರ್ ಆಕ್ರೋಶ

ಹೊಸದಿಗಂತ ಬೆಳಗಾವಿ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಸಂಪೂರ್ಣವಾಗಿ ‘ಕರಾವಳಿ ವಿರೋಧಿ’ ಎಂದು ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ವಿಧಾನಸೌಧದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದ ಅಭಿವೃದ್ಧಿಗೆ ಪೂರಕವಾದ ಯಾವುದೇ ಯೋಜನೆಗಳನ್ನು ಬಜೆಟ್‌ನಲ್ಲಿ ಘೋಷಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರಾವಳಿಯ ಪ್ರವಾಸೋದ್ಯಮ ವಲಯದ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ನೀಡುವಂತೆ ನಾವು ಒತ್ತಾಯಿಸಿದ್ದೆವು. ಆದರೆ ಬಜೆಟ್‌ನಲ್ಲಿ ಈ ಬಗ್ಗೆ ಯಾವುದೇ ಸ್ಪಷ್ಟ ಉಲ್ಲೇಖವಿಲ್ಲ.

ಉಡುಪಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಆದರೆ ಸರ್ಕಾರ ಈ ಬೇಡಿಕೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ.

ಮೀನುಗಾರರ ಜೀವನೋಪಾಯ ಮತ್ತು ಅವರ ಸಂಕಷ್ಟಗಳನ್ನು ಆಲಿಸುವಲ್ಲಿ ಸರ್ಕಾರ ವಿಫಲವಾಗಿದೆ. ಬಂದರುಗಳ ಅಭಿವೃದ್ಧಿಗೆ ಅಗತ್ಯವಾದ ಒತ್ತು ಈ ಬಜೆಟ್‌ನಲ್ಲಿ ಕಂಡುಬಂದಿಲ್ಲ.

ಒಟ್ಟಾರೆಯಾಗಿ, ಈ ಬಜೆಟ್ ಕರಾವಳಿ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಈ ಭಾಗಕ್ಕೆ ದೊಡ್ಡ ಅನ್ಯಾಯ ಮಾಡಿದೆ ಎಂದು ಸುನಿಲ್ ಕುಮಾರ್ ಕಿಡಿಕಾರಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !