ಉಡುಪಿ ನೇಜಾರು ಹತ್ಯಾಕಾಂಡ: ಆರೋಪಿ ಚೌಗಲೆ ಅರ್ಜಿ ತಿರಸ್ಕರಿಸಿದ ಕೋರ್ಟ್

ಹೊಸದಿಗಂತ, ಮಂಗಳೂರು:

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಉಡುಪಿ ಜಿಲ್ಲೆಯ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಪೆರೋಲ್ ಅರ್ಜಿ ತಿರಸ್ಕೃತವಾಗಿದೆ.

ಪೆರೋಲ್ ನೀಡದಂತೆ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಎಚ್.ಎಂ. ನದಾಫ್ ಸಲ್ಲಿಸಿದ ಆಕ್ಷೇಪಣೆಯನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಪುರಸ್ಕರಿಸಿದೆ.

ತನ್ನ ಸಹೋದರ ನಿತೀನ್ ಮೃತಪಟ್ಟಿದ್ದು, ಆತನ ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಮೂರು ತಾಸು ಭಾಗವಹಿಸಲು ಅನುಕೂಲವಾಗುವಂತೆ ತನ್ನ ಊರಾದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಗೆ ತೆರಳಲು ಪರೋಲ್ ಮಂಜೂರು ಮಾಡುವಂತೆ ಚೌಗಲೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಆದರೆ ಆರೋಪಿಗೆ ಪರೋಲ್ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗುತ್ತದೆ. ಅಲ್ಲದೆ ಆರೋಪಿ ಮೇಲೆ ದಾಳಿಯಾಗುವ ಸಾಧ್ಯತೆ ಇರುತ್ತದೆ.

ಇದಲ್ಲದೆ ಆರೋಪಿ ತನ್ನ ಸಹೋದರ ಮೃತಪಟ್ಟ ಬಗ್ಗೆ ಯಾವುದೇ ಮರಣ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸದೆ ಇರುವುದರಿಂದ ಆತನಿಗೆ ಪರೋಲ್ ನೀಡಬಾರದು ಎಂದು ನದಾಫ್ ನ್ಯಾಯಾಲಯದ ಗಮನಕ್ಕೆ ತಂದಿದ್ದರು. ಈ ಕುರಿತು ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಯ ಪೆರೋಲ್ ಅರ್ಜಿಯನ್ನು ತಿರಸ್ಕರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!