Thursday, July 7, 2022

Latest Posts

ಉಡುಪಿ| ಕೊರೋನಾ ಪಾಸಿಟಿವಿಟಿ ದರ ಶೇ. 2ಕ್ಕಿಂತ ಕೆಳಗಿಳಿಸುವುದು ನಮ್ಮ ಗುರಿ: ಜಿಲ್ಲಾಧಿಕಾರಿ ಜಿ. ಜಗದೀಶ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ ಉಡುಪಿ:

ರಾಜ್ಯಕ್ಕೆ ಹೋಲಿಸಿದಾಗ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ಎರಡು ತಿಂಗಳಿಂದ ಸೋಂಕು ದೃಢಪಡುವ ಪ್ರಮಾಣ ಶೇ. 2.5-3ರಷ್ಟಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಹಲವೆಡೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ. ಮಾಸ್ಕ್ ಧರಿಸುವ ಬಗ್ಗೆ ಸಾರ್ವಜನಿಕರ ನಿರ್ಲಕ್ಷ್ಯ ಕಂಡುಬರುತ್ತಿದೆ. ಮಾಸ್ಕ್ ಧರಿಸದೇ ಓಡಾಡುವವರು ಕೋವಿಡ್ ಟೆಸ್ಟ್ ಮಾಡುವುದಕ್ಕೆ ತಜ್ಞರ ಸಮಿತಿಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ ಎಂದರು.
ರಾಜ್ಯಾದ್ಯಂತ ಶಾಲೆ ಆರಂಭವಾದರೂ ನಮ್ಮಲ್ಲಿ ಆಗಿಲ್ಲ. ಹಾಗಾಗಿ ಕೆಲವೊಂದು ಕಠಿಣ ಕ್ರಮ ಜರಗಿಸುವುದು ಅನಿವಾರ್ಯ. ನಮ್ಮ ಮಕ್ಕಳಿಗೂ ಶಿಕ್ಷಣ ಸಿಗಬೇಕು ಎಂಬುದು ನಮ್ಮ ಆಶಯ. ಆದ್ದರಿಂದ ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕೋವಿಡ್ ಪರೀಕ್ಷೆ ಸಂಖ್ಯೆ ಹೆಚ್ಚಿಸಲಾಗಿದೆ. ಪ್ರತಿದಿನ 10 ಸಾವಿರ ಕೋವಿಡ್ ಟೆಸ್ಟ್ ಗುರಿ ಹೊಂದಿದ್ದೇವೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ. 2ಕ್ಕಿಂತ ಕಡಿಮೆ ಮಾಡುವುದು ನಮ್ಮ ಗುರಿ. ಆಗಸ್ಟ್ ಅಂತ್ಯಕ್ಕೆ ಶೇ. 2 ಕಡಿಮೆ ಪಾಸಿಟಿವಿಟಿ ತರುತ್ತೇವೆ. ಈ ಬಗ್ಗೆ ಆರೋಗ್ಯ ಇಲಾಖೆಗೆ ಸೂಚನೆ ಕೊಟ್ಟಿದ್ದೇವೆ ಎಂದರು.
ಕೋವಿಡ್ ಲಸಿಕೆ ನೀಡುವುದರಲ್ಲಿ ಉಡುಪಿ ಜಿಲ್ಲೆ ಎರಡನೇ ಸ್ಥಾನ ಗಳಿಸಿದೆ. ಈಗಾಗಲೇ ಶೇ‌. 64ರಷ್ಟಯ ಜನರಿಗೆ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಶೇ. 85ರಷ್ಟು ಮಂದಿಗೆ ಲಸಿಕೆ ಕೊಟ್ಟಾಗಿದೆ. ಹಿರಿಯ ನಾಗರಿಕರನ್ನು ಹುಡುಕಿ, ಮನೆಮನೆಗೆ ತೆರಳಿ ಲಸಿಕೆ ನೀಡುತ್ತೇವೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss