ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ವಿವಾದಕ್ಕೆ ಕಾರಣವಾಗಿದ್ದ ಉಡುಪಿ ಪ್ಯಾರಾಮೆಡಿಕಲ್ ಕಾಲೇಜ್ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಸಿಐಡಿ, 1,100 ಪುಟಗಳ ಚಾರ್ಜ್ ಶೀಟ್‌ನ್ನು ಉಡುಪಿ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಜುಲೈ 26, 2023ರಂದು ನಡೆದಿದ್ದ ಈ ಘಟನೆ ಭಾರೀ ಆಕ್ರೋಶ, ಪ್ರತಿಭಟನೆಗಳಿಗೆ ಕಾರಣವಾಗಿತ್ತು. ತನಿಖೆ ಕೈಗೆತ್ತಿಕೊಂಡಿದ್ದ ಸಿಐಡಿ ಒಟ್ಟು ಹತ್ತು ತಿಂಗಳ ಬಳಿಕ ತನ್ನ ತನಿಖೆಯನ್ನು ಪೂರ್ಣಗೊಳಿಸಿದೆ.
ಈ ಪ್ರಕರಣದಲ್ಲಿ ಒಟ್ಟು 32 ಮಂದಿಯನ್ನು ಪ್ರಮುಖ ಸಾಕ್ಷ್ಯ ಎಂದು ಪರಿಗಣಿಸಲಾಗಿದೆ. ವಿಡಿಯೋ ಚಿತ್ರೀಕರಣದ ಕುರಿತು ವಿದ್ಯಾರ್ಥಿಗಳ ಹೇಳಿಕೆಯೇ ಪ್ರಮುಖ ಸಾಕ್ಷಿ ಎಂದು ಇಲ್ಲಿ ಪರಿಗಣಿಸಲಾಗಿದೆ.
ಇನ್ನು ಅಹಮದಾಬಾದ್ ಎಫ್‌ಎಸ್‌ಎಲ್ ನೀಡಿದ ವರದಿಯಲ್ಲಿ ಘಟನೆಗೆ ಸಂಬಂಧಿಸಿ ಯಾವುದೇ ಪುರಾವೆಗಳು ಕಂಡುಬಂದಿಲ್ಲ. ಮೊಬೈಲ್ ನಲ್ಲಿ ವೀಡಿಯೋ ಡಿಲೀಟ್ ಆಗಿದ್ದು, ವಿಡಿಯೋ ಬ್ಯಾಕಪ್ ನಡೆಡೆದಿಲ್ಲ ಎಂದು ಎಫ್‌ಎಸ್‌ಎಲ್ ವರದಿ ನೀಡಿದೆ.