ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ವಿಡಿಯೋ ವಿವಾದದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜುಲೈ 18 ರಂದು ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರು ವಿಡಿಯೋ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.ಇದೀಗ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸದ್ಯ ಪೊಲೀಸರು ಮೊಬೈಲ್ ನ್ನು ಎಫ್ ಎಸ್ ಎಲ್ ತನಿಖೆಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಕರೆದಾಗ ತನಿಖೆಗೆ ಖುದ್ದು ಹಾಜರಾಗಬೇಕು ಎಂದು ಉಡುಪಿ JMFC ನ್ಯಾಯಾಲಯ ಷರತ್ತುಬದ್ದ ಜಾಮೀನು ನೀಡಿತ್ತು.
ಈ ಎಲ್ಲದರ ನಡುವೆ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿತ್ತು. ಸದ್ಯ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿ ಹೆಗಲಿಗೆ ಒಪ್ಪಿಸಿ ಆದೇಶಿಸಿದೆ.