ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ಕಾಲೇಜು ವಿಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಎಸ್ಐಟಿಗೆ ವಹಿಸುವ ಮಾತೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರ ಜತೆ ಸಿಎಂ ಮಾತನಾಡಿದ್ದು, ಡಿವೈಎಸ್ಪಿ ಮಟ್ಟದ ಅಧಿಕಾರಿಗಳು ತನಿಖೆ ಮಾಡ್ತಿದ್ದಾರೆ, ಹಾಗಾಗಿ ಎಸ್ಐಟಿಗೆ ವಹಿಸುವ ಮಾತೇ ಇಲ್ಲ. ತನಿಖೆ ಸಂಪೂರ್ಣವಾಗಿ ವರದಿ ಬರಲಿ, ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.