ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ವಿಡಿಯೋ ಪ್ರಕರಣಕ್ಕೆ (Udupi College Toilet Video Row) ಸಂಬಂಧಿಸಿದಂತೆ ಆರೋಪಿಗಳಾಗಿರುವ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿಯ ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಶುಕ್ರವಾರ ಷರತ್ತು ಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಇಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮೂವರಿಗೂ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳಾದ ಶಬನಾಜ್, ಆಲ್ಫಿಯಾ,ಆಲಿಮಾತುಲ್ ಶಾಫಿಯಾ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ: 509,204,175,34 ಐ,ಪಿ,ಸಿ,ಮತ್ತು 66(ಇ) ಐಟಿ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.
ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದು, ತನಿಖಾಧಿಕಾರಿಗಳಿಗೆ ತನಿಖೆಗೆ ಸಹಕರಿಸುವುದು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗುವುದು, ಸಾಕ್ಷಿಗಳಿಗೆ ಯಾವುದೇ ಬೆದರಿಕೆಯೊಡ್ಡದಿರುವುದು ಮತ್ತು ತಲಾ 20,000ರೂ. ಮೊತ್ತ ಬಾಂಡ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೇರಿದಂತೆ ಹಲವು ಷರತ್ತಿಗಳನ್ನು ನ್ಯಾಯಾಲಯ ವಿಧಿಸಿದೆ.