ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಯಲ್ಲಿ ಹಿಂದು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಮುಖ್ಯಮಂತ್ರಿ ಅವರು ಗಂಭೀರವಾಗಿ ಪರಿಗಣಿಸಬೇಕು ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲು ಹೇಳಿದರು.
ಮಂಗಳೂರುನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.
ಉಡುಪಿ ಘಟನೆಯನ್ನು ಪೊಲೀಸ್ ಇಲಾಖೆ ಮುಚ್ಚಿ ಹಾಕುವ ಯತ್ನ ನಡೆಸಿತ್ತು. ಘಟನೆಯ ಎಸ್‌ಐಟಿ ಅಥವಾ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದಲ್ಲಿ ಉಚಿತ ಘೋಷಣೆ, ಸುಳ್ಳು ಭರವಸೆಗಳ ಮೂಲಕ ಕಾಂಗ್ರೆಸ್ ಅಕಾರಕ್ಕೆ ಬಂದಿದೆ. ಅಕಾರಕ್ಕೇರಿದ ಕಾಂಗ್ರೆಸ್ ದ್ವೇಷದ ರಾಜಕಾರಣ ನಡೆಸುತ್ತಿದ್ದು, ಹಿಂದು ವಿರೋಧಿಯಾಗಿ ವರ್ತಿಸುತ್ತಿದೆ. ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿಲ್ಲ. ಉಚಿತ ಘೋಷಣೆಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಹಿಂದೆ ಬಿಜೆಪಿ ಸರಕಾರ ರಸ್ತೆ, ಅಭಿವೃದ್ಧಿ ಕಾರ್ಯಗಳಿಗೆ ನೀಡಿದ ಅನುದಾನವನ್ನು ಸ್ಥಗಿತಗೊಳಿಸಿದೆ. ಕಾಂಗ್ರೆಸ್ ಶಾಸಕರೇ ಬಂಡಾಯ ಏಳುವ ಸ್ಥಿತಿ ಉಂಟಾಗಿದೆ. ತೆರಿಗೆ ಹೆಚ್ಚಿಸಲಾಗುತ್ತಿದೆ. ವಿದ್ಯುತ್ ದರ ಹೆಚ್ಚಿಸಲಾಗಿದೆ. ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸಲಾಗುತ್ತಿದೆ. ಪೊಲೀಸ್, ಗುಪ್ತಚರ ಸೇರಿದಂತೆ ಇಲಾಖೆಗಳಲ್ಲಿ ಸಂಬಳ ನೀಡಲು ಸಾಧ್ಯವಾಗದ ಕೆಟ್ಟ ಪರಿಸ್ಥಿತಿ ಉಂಟಾಗಿದೆ. ರೈತರ ಆತ್ಮಹತ್ಯೆ, ಹತ್ಯೆಗಳು ನಡೆಯುತ್ತಿವೆ. ಭಾಗ್ಯಲಕ್ಷ್ಮೀ, ಕಿಸಾನ್‌ಸಮ್ಮಾನ್, ರೈತ ವಿದ್ಯಾನಿಧಿ ಯೋಜನೆಗಳನ್ನು ನಿಲ್ಲಿಸಿದೆ. ಸರಕಾರ ರೈತರು, ಹಿಂದೂ ಸಮಾಜದ ವಿರೋಯಾಗಿದೆ. ಮತಾಂತರ ನಿಷೇಧ ಕಾಯಿದೆ, ಗೋಹತ್ಯೆ ನಿಷೇಧ ಕಾಯಿದೆ ವಾಪಸ್ ಪಡೆಯುತ್ತಿದೆ ಎಂದರು.