ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿ ವಿಡಿಯೋ ವಿವಾದ ಕುರಿತು ಸರ್ಕಾರ ಜವಾಬ್ದಾರಿಯಿಂದ ನಡೆದುಕೊಳ್ಳುತ್ತದೆ. ಅದಕ್ಕೆ ರಾಜಕೀಯ ಬಣ್ಣ ಕೊಡುವ ಅಗತ್ಯವಿಲ್ಲ, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ಮಾಡುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿಂದು ಮಾತನಾಡಿದ ಅವರು, ಸರ್ಕಾರ ಇಂತಹ ಘಟನೆಗಳನ್ನು ಲಘುವಾಗಿ ತೆಗೆದುಕೊಂಡಿಲ್ಲ. ಆದರೆ ಬಿಜೆಪಿಯವರು ಬೇರೆ ಅರ್ಥ, ವ್ಯಾಖ್ಯಾನದಲ್ಲಿ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಜನರು ಕೊಟ್ಟ ತೀರ್ಪಿನಂತೆ ಜವಾಬ್ದಾರಿಯಿಂದ ಸರ್ಕಾರ ನಡೆಸುತ್ತೇವೆ ಎಂದರು.