ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಉದ್ಯಮಿ ರತನ್ ಟಾಟಾ ಅವರಿಗೆ ‘ಉದ್ಯೋಗ ರತ್ನ’ ಪ್ರಶಸ್ತಿ ನೀಡುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಣೆ ಮಾಡಿದೆ.
ಮಹಾರಾಷ್ಟ್ರ ಕಾರ್ಖಾನೆ ಸಚಿವ ಸಾವಂತ್ ಅವರು ವಿಧಾನ ಪರಿಷತ್ನಲ್ಲಿ ಈ ಘೋಷಣೆ ಮಾಡಿದ್ದಾರೆ.ರತನ್ ಟಾಟಾ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ ನೀಡಲು ಸರ್ಕಾರ ತೀರ್ಮಾನಿಸಿದೆ’ ಎಂದು ಅವರು ಹೇಳಿದರು.
ಈ ಬಗ್ಗೆ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್, ಅಜಿತ್ ಪವಾರ್ ಹಾಗೂ ನಾನು ಭಾಗಿಯಾಗಿದ್ದೆವು’ ಎಂದು ಅವರು ತಿಳಿಸಿದರು.