ನಾಡಿನೆಲ್ಲೆಡೆ ಯುಗಾದಿ ಸಂಭ್ರಮಾಚರಣೆ: ದೇವಾಲಯಗಳಲ್ಲಿ ವಿಶೇಷ ಪೂಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಿಂದೂ ಪಂಚಾಂಗದ ಪ್ರಕಾರ ಹೊಸ ವರ್ಷ ಯುಗಾದಿ. ಹೊಸ ಯುಗದ ಆದಿ ಯುಗಾದಿಯಾಗಿದೆ. ದಕ್ಷಿಣ ಭಾರತೀಯರಿಗೆ ಇಂದು ವಿಶೇಷ ಹಬ್ಬ. ಆಂಧ್ರಪ್ರದೇಶ, ಕರ್ನಾಟಕ, ತೆಲಂಗಾಣ ಮತ್ತು ಗೋವಾ ರಾಜ್ಯಗಳಲ್ಲಿ ಈ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತದೆ. ಈ ದಿನವನ್ನು ಮಹಾರಾಷ್ಟ್ರ, ಮಧ್ಯಪ್ರದೇಶ, ಹಾಗೆಯೇ ಇನ್ನಿತರ ರಾಜ್ಯಗಳಲ್ಲಿ ಹಿಂದೂಗಳು ಹೊಸ ವರ್ಷವನ್ನು ಗುಡಿ ಪಾಡ್ವಾ ಎಂದು ಆಚರಿಸುತ್ತಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ದೇವಾಲಯಗಳಲ್ಲಿ ಪೂಜೆ-ಪುನಸ್ಕಾರಗಳು ಮುಂಜಾನೆಯಿಂದಲೇ ನಡೆಯುತ್ತಿದೆ. ಬೆಳಗ್ಗೆಯೇ ಎದ್ದು ಮನೆಯನ್ನು ಗುಡಿಸಿ ಒರೆಸಿ, ಪೂಜೆ ಪುನಸ್ಕಾರಗಳನ್ನು ಮುಗಿಸಿ ಜನ ದೇವರ ದರುಶನಕ್ಕೆ ಆಗಮಿಸಿದ್ದಾರೆ.

ಬೇಸಿಗೆಯ ಬಿರುಬಿಸಿಲು ಈ ಬಾರಿ ಜೋರಾಗಿಯೇ ಇದೆ. ಅದರ ಜೊತೆ ಮಾರುಕಟ್ಟೆಯಲ್ಲಿ ತರಕಾರಿ, ಹೂವು, ಹಣ್ಣು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಆದರೆ ಹಬ್ಬ ಆಚರಣೆಯಲ್ಲಿ ಜನರು ಹಿಂದೆ ಬಿದ್ದಿಲ್ಲ. ಸಾಮಾನ್ಯವಾಗಿ ಹಬ್ಬಗಳ ವೇಳೆ ಹೂವಿನ ಬೆಲೆ ಏರಿಕೆಯಾಗುತ್ತದೆ. ಈ ಬಾರಿಯೂ ಚೆಂಡು, ಗುಲಾಬಿ, ಬಟನ್ಸ್‌, ಸೇವಂತಿ ಬೆಲೆ ಸೇರಿದಂತೆ ಹಲವು ಬೆಲೆಗಳು ಏರಿಕೆಯಾಗಿವೆ. ಇದರ ಜೊತೆಗೆ ತರಕಾರಿ ಬೆಲೆಯೂ ಹೆಚ್ಚಾಗಿದ್ದು, ಮಧ್ಯಮ ವರ್ಗದ ಜನರಿಗೆ ಹೊಡೆತ ಬಿದ್ದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!