ಕನ್ನಡ ಸಹಿತ 13 ಭಾಷೆಗಳಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಹೊಸದಿಲ್ಲಿ: ಕೇಂದ್ರೀಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿಯೂ ಬರೆಯುವುದಕ್ಕೆ ಯುಜಿಸಿ ಅನುಮತಿಸಿದೆ.

ಎಲ್ಲ ಯುಜಿಸಿ ಅನುದಾನಿತ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ 2022-23ರ ಶೈಕ್ಷಣಿಕ ಸಾಲಿನಿಂದ ಪ್ರವೇಶಕ್ಕಾಗಿ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (ಸಿಯುಇಟಿ)ಯನ್ನು ಹಿಂದಿ, ಕನ್ನಡ, ಮರಾಠಿ, ಗುಜರಾತಿ, ತಮಿಳು, ತೆಲುಗು, ಮಲಯಾಳಂ, ಉರ್ದು, ಒಡಿಯಾ, ಅಸ್ಸಾಮಿ, ಬೆಂಗಾಲಿ, ಪಂಜಾಬಿ ಮತ್ತು ಇಂಗ್ಲಿಷ್ ಸಹಿತ ಒಟ್ಟು 13 ಭಾಷೆಗಳಲ್ಲಿ ನಡೆಸಲಾಗುತ್ತದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಈ ಪರೀಕ್ಷೆಯನ್ನು ನಡೆಸಲಿದೆ. ಸಿಯುಇಟಿ ಅನ್ನು ರಾಜ್ಯ/ಖಾಸಗಿ/ಡೀಮ್ಡ್ ವಿಶ್ವವಿದ್ಯಾಲಯಗಳು ಸಹ ಅಳವಡಿಸಬಹುದಾಗಿದೆ ಎಂದು ಯುಜಿಸಿ ಪ್ರಕಟಣೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!