Wednesday, June 7, 2023

Latest Posts

ಯುಜಿಸಿ ಎನ್‌ಇಟಿ ಪರೀಕ್ಷೆ 2023 ಜೂನ್ ಸೆಷನ್: ನೊಂದಣಿ ಪ್ರಕ್ರಿಯೆ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯೂನಿವರ್ಸಿಟಿ ಗ್ರಾಂಟ್ಸ್‌ ಕಮಿಷನ್ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಜೂನ್ 2023ರ ಸೆಷನ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮೇ 10, 2023 ರಿಂದ ಆರಂಭವಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 31, 2023 ಕೊನೆಯ ದಿನವಾಗಿರುತ್ತದೆ.

ಜೂನ್ ಸೆಷನ್‌ ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://ugcnet.nic.in ಗೆ ಭೇಟಿ ನೀಡಿ ಅರ್ಜಿ ಹಾಕಬಹುದು.

ಯುಜಿಸಿ ಎನ್‌ಇಟಿ ಜೂನ್ 2023ರ ಸೆಷನ್ ಪರೀಕ್ಷೆಗಳು ಜೂನ್ 13 ರಿಂದ ಜೂನ್ 22,2023ರ ನಡುವೆ ನಡೆಸಲಾಗುವುದು ಎಂದು ಯುಜಿಸಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಯುಜಿಸಿ ನೆಟ್ ಪರೀಕ್ಷೆಯನ್ನು, ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು 83 ವಿಷಯಗಳಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೋಡ್‌ನಲ್ಲಿ ನಡೆಸಲಾಗುತ್ತದೆ.

ಹೆಚ್ಚಿನ ಮಾಹಿತಿಯನ್ನು ಪಡೆಯಲು ಅಧಿಕೃತ ಪ್ರಕಟಣೆಯನ್ನು ಓದಬಹುದು ಅಥವಾ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಬಹುದು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!