June 6, 2026
Saturday, June 6, 2026
spot_img

ಯುಜಿಸಿಟಿಸಿ ಫಲಿತಾಂಶ ಪ್ರಕಟ: ಆರ್‌ವಿ ಕಾಲೇಜಿನ ತನಿಷಾಗೆ ಫಸ್ಟ್‌ ರ‍್ಯಾಂಕ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

2026 ನೇ ಸಾಲಿನ ಯುಜಿಸಿಟಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಬೆಂಗಳೂರಿನ ಆರ್‌ ವಿ ಕಾಲೇಜಿನ ತನಿಷಾ ಕಾರ್ತಿಕ್ ಪ್ರಥಮ‌ ಸ್ಥಾನ ಪಡೆದುಕೊಂಡಿದ್ದಾರೆ.

ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಮಧ್ಯಾಹ್ನ ಎರಡು ಗಂಟೆಯಿಂದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಆನ್‌ಲೈನ್‌ ಮೂಲಕ ವೀಕ್ಷಿಸಬಹುದಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಈ ಪರೀಕ್ಷೆಯಲ್ಲಿ ಈ ಬಾರಿ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಂಜಿನಿಯರಿಂಗ್, ಫಾರ್ಮಸಿ, ಕೃಷಿ, ವೆಟರಿನರಿ, ಬಿಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಸಿಇಟಿ ರ‍್ಯಾಂಕ್ ಅತ್ಯಂತ ಮಹತ್ವದ್ದಾಗಿದೆ.

ಇಂಜಿನಿಯರಿಂಗ್‌ ವಿಭಾಗದಲ್ಲಿ ಜಯನಗರದ ಆರ್‌ವಿ ಪಿಯು ಕಾಲೇಜಿನ ವಿದ್ಯಾರ್ಥಿನಿ ತನಿಷಾ ಕಾರ್ತಿಕ್‌ ಅವರು ಮೊದಲ ಸ್ಥಾನ ಪಡೆದರೆ, ಸೃಜನ್‌ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ, ನಿನಾದ್‌ ತೃತೀಯ ಸ್ಥಾನ ಗಳಿಸಿದ್ದಾರೆ. ಇನ್ನು ವೆಟರ್ನರಿ ಭಾಗದಲ್ಲಿ ನಯನಾ ಗೋಪಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !