Sunday, December 10, 2023

Latest Posts

ಉಜ್ಜಯನಿ ರೇಪ್ ಕೇಸ್: ಮರಣದಂಡನೆ ಕೊಡದಿದ್ರೆ ನಾನೇ ಕೊಲೆ ಮಾಡುವೆ ಎಂದ ಆರೋಪಿ ತಂದೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ಉಜ್ಜಯನಿಯಲ್ಲಿ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ಎಸಗಿದ್ದು, ರಕ್ತದ ಮಡುವಿನಲ್ಲಿ ಬಾಲಕಿ ನಡೆದುಬರುತ್ತಿದ್ದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.

ಬಾಲಕಿ ಸಹಾಯಕ್ಕಾಗಿ ಅಂಗಲಾಚಿದ್ದರೂ ಯಾರೂ ಆಕೆಯ ಸಹಾಯಕ್ಕೆ ಬಂದಿಲ್ಲ, ಚರ್ಚ್‌ನ ಫಾದರ್ ಆಕೆಗೆ ಸಹಾಯ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ಪ್ರಕರಣ ಇಡೀ ಮಾನವಕುಲವೇ ತಲೆತಗ್ಗಿಸುವಂತೆ ಮಾಡಿತ್ತು.

ಇದೀಗ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದ್ದು, ಆರೋಪಿ ಭರತ್ ಸೋನಿ ತಂದೆ ಈ ಬಗ್ಗೆ ಮಾತನಾಡಿದ್ದಾರೆ. ಮಗನಿಗೆ ಗಲ್ಲು ಶಿಕ್ಷೆ ನೀಡಿ, ಆತ ಸಾಯಬೇಕು, ನೀವು ಶಿಕ್ಷೆ ಕೊಡಲಿಲ್ಲ ಎಂದಾದರೆ ನಾನೇ ಆತನನ್ನು ಕೊಲೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!