ಭಾರತದಲ್ಲಿ ಯುಕೆ ಪ್ರಧಾನಿ ಪ್ರವಾಸ, ಮೋದಿಯೊಂದಿಗೆ ಮಾತುಕತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮುಂದಿನ ವಾರ ಭಾರತಕ್ಕೆ ಆಗಮಿಸಲಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಬೋಲ್ಸ್ಟರ್ ಕ್ಲೋಸ್‌ ಪಾಲುದಾರಿಕೆ ಹಾಗೂ ಭದ್ರತಾ ಸಹಕಾರದ ಸಮಸ್ಯೆಗಳನ್ನು ಚರ್ಚಿಸುವ ಉದ್ದೇಶದಿಂದ ಬರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಯುಕೆ ಮತ್ತು ಭಾರತದ ನಡುವಿನ ವಾಣಿಜ್ಯ, ವ್ಯಾಪಾರ ಮತ್ತು ಸಾರ್ವಜನಿಕ ಸಂಬಂಧಗಳ ಕುರಿತು ಚರ್ಚಿಸಲು ಅವರು ಗುರುವಾರ, ಏಪ್ರಿಲ್ 21 ರಂದು ಅಹಮದಾಬಾದ್‌ಗೆ ಆಗಮಿಸಲಿದ್ದಾರೆ. ಇದು ಗುಜರಾತ್‌ಗೆ ಯುಕೆ ಪ್ರಧಾನಿಯ ಮೊದಲ ಭೇಟಿಯಾಗಿದೆ.
ಗುಜರಾತ್‌ನಲ್ಲಿ, ಜಾನ್ಸನ್ ಹೊಸ ವಿಜ್ಞಾನ, ಆರೋಗ್ಯ ಮತ್ತು ತಂತ್ರಜ್ಞಾನ ಯೋಜನೆಗಳಲ್ಲಿ ಪ್ರಮುಖ ಹೂಡಿಕೆಗಳ ಬಗ್ಗೆ ಘೋಷಿಸಲಿದ್ದಾರೆ.

ಬಳಿಕ ಬೋರಿಸ್ ಜಾನ್ಸನ್ ಏಪ್ರಿಲ್ 22 ರ ಶುಕ್ರವಾರದಂದು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಲು ನವದೆಹಲಿಗೆ ತೆರಳಲಿದ್ದಾರೆ. ಯುಕೆ ಮತ್ತು ಭಾರತದ ನಡುವಿನ ರಕ್ಷಣಾ ಕಾರ್ಯತಂತ್ರ, ರಾಜತಾಂತ್ರಿಕ, ಆರ್ಥಿಕ ಪಾಲುದಾರಿಕೆ ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಭದ್ರತಾ ಸಹಕಾರದ ಬಗ್ಗೆ ಮಾತನಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!