ಹೊಸದಿಗಂತ ಡಿಜಿಟಲ್ ಡೆಸ್ಕ್:
ಉನ್ನತ ವ್ಯಾಸಂಗಕ್ಕಾಗಿ ಯುಕೆಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿ ದಾರಿ ತಪ್ಪಿದ ಘಟನೆ ನಡೆದಿದೆ. ಯುವತಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯ 9 ವರ್ಷ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಆ ವಿದ್ಯಾರ್ಥಿಯ ಹೆಸರು ಪ್ರೀತ್ ವಿಕಲ್. ವಯಸ್ಸು 20 ವರ್ಷ. ಉನ್ನತ ವ್ಯಾಸಂಗ ಮಾಡಲು ಯುಕೆಗೆ ತೆರಳಿದ್ದ. ಪ್ರೀತ್ ವಿಕಲ್ ತನ್ನ ಸ್ನೇಹಿತರೊಂದಿಗೆ ಹೊರಗೆ ಹೋದ ವೇಳೆ ಕುಡಿದ ಮತ್ತಿನಲ್ಲಿದ್ದ ಯುವತಿ ಈತನ ಕಣ್ಣಿಗೆ ಬಿದ್ದಿದ್ದಾಳೆ. ಸರಿಯಾಗಿ ನಿಲ್ಲಲು ಆಗ ಯುವತಿಯನ್ನು ಹೊತ್ತೊಯ್ದು ಅತ್ಯಾಚಾರ ಎಸಗಿದ್ದಾನೆ.
ಪ್ರೀತ್ ವಿಕಲ್ ಯುವತಿಯನ್ನು ತನ್ನ ಕೋಣೆಗೆ ಕರೆದುಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಪ್ರೀತ್ ವಿಕಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆತನನ್ನು ಬಂಧಿಸಲಾಗಿದೆ. ಇದಕ್ಕೆ ಸಂತ್ರಸ್ತೆ ಪ್ರತಿಕ್ರಿಯಿಸಿದ್ದು, ತನಗೆ ನಡೆದ ದೌರ್ಜನ್ಯದಿಂದ ಸರಿಯಾಗಿ ನಿದ್ದೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ. ಪ್ರಜ್ಞೆ ಬಂದಾಗ ನಡೆದ ಅನಾಹುತ ಅರ್ಥವಾಯಿತು ಎಂದರು.
ಇದಕ್ಕೆ ಪೊಲೀಸರು ಕೂಡ ಪ್ರತಿಕ್ರಿಯಿಸಿದ್ದು, “ಕಾರ್ಡಿಫ್‌ನ ಫ್ಲಾಟ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯೊಬ್ಬನನ್ನು ಜೈಲಿಗೆ ಹಾಕಲಾಗಿದೆ. ಸಿಸಿಟಿವಿಯಲ್ಲಿ ಪ್ರೀತ್ ವಿಕಲ್ ಯುವತಿಯನ್ನು ತನ್ನ ತೋಳುಗಳಲ್ಲಿ ಹಿಡಿದಿಟ್ಟುಕೊಂಡು ಸಿಟಿ ಸೆಂಟರ್‌ನಿಂದ ಹೊರಗೆ ಹೋಗುತ್ತಿರುವುದು ದಾಖಲಾಗಿದೆ”ಎಂದು ಸೌತ್ ವೇಲ್ಸ್ ಪೊಲೀಸ್ ಕಾರ್ಡಿಫ್ ಟ್ವೀಟ್ ಮಾಡಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಪ್ರೀತ್ ವಿಕಲ್ ನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.