ಹೊಸದಿಗಂತ ಆನ್ ಲೈನ್ ಡೆಸ್ಕ್:
ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಏಪ್ರಿಲ್ ತಿಂಗಳ ಅಂತ್ಯದಲ್ಲಿ ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ.
ಐರೋಪ್ಯ ಒಕ್ಕೂಟದಿಂದ ಹೊರಬಂದ ಬಳಿಕ ಬ್ರಿಟನ್ ಪ್ರಧಾನಿಯ ಪ್ರಮುಖ ಅಂತಾರಾಷ್ಟ್ರೀಯ ಪ್ರವಾಸ ಇದಾಗಿದ್ದು, ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರ ಮಾತುಕತೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಪ್ರವಾಸ ಯೋಜಿಸಲಾಗಿದೆ.
2021ರ ಗಣರಾಜ್ಯೋತ್ಸವಕ್ಕೆ ಬೋರಿಸ್ ಜಾನ್ಸನ್ ಅತಿಥಿಯಾಗಿ ಆಗಮಿಸಬೇಕಿತ್ತು. ಆದರೆ ಕೊರೋನಾ ಸೋಂಕು ಉಲ್ಬಣವಾಗುತ್ತಿದ್ದ ಹಿನ್ನೆಲೆ ಪ್ರವಾಸ ರದ್ದುಮಾಡಲಾಗಿತ್ತು.