June 11, 2026
Thursday, June 11, 2026
spot_img

ಮಾಸ್ಕೋ ನಡುಗಿಸಿದ ಉಕ್ರೇನ್ ದಾಳಿ: 500ಕ್ಕೂ ಹೆಚ್ಚು ಡ್ರೋನ್‌ಗಳಿಂದ ರಷ್ಯಾದ ಮೇಲೆ ಅಟ್ಯಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಉಕ್ರೇನ್ ಇದೀಗ ಮಾಸ್ಕೋ ಸೇರಿದಂತೆ ರಷ್ಯಾದ ಹಲವು ಭಾಗಗಳ ಮೇಲೆ ಭಾರೀ ಡ್ರೋನ್ ದಾಳಿ ನಡೆಸಿದೆ.

ಒಂದೇ ರಾತ್ರಿ ನಡೆದ ಈ ದಾಳಿಯಲ್ಲಿ 500ಕ್ಕೂ ಹೆಚ್ಚು ಡ್ರೋನ್‌ಗಳನ್ನು ಬಳಸಲಾಗಿದೆ ಎಂದು ರಷ್ಯಾ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಒಂದು ವರ್ಷದ ಅವಧಿಯಲ್ಲಿ ಉಕ್ರೇನ್ ನಡೆಸಿದ ಅತಿದೊಡ್ಡ ಡ್ರೋನ್ ದಾಳಿ ಇದಾಗಿದೆ ಎನ್ನಲಾಗಿದೆ.

ರಷ್ಯಾದ ರಕ್ಷಣಾ ಸಚಿವಾಲಯದ ಪ್ರಕಾರ, 556 ಉಕ್ರೇನಿನ ಡ್ರೋನ್‌ಗಳನ್ನು ವಾಯು ರಕ್ಷಣಾ ಪಡೆಗಳು ಹೊಡೆದುರುಳಿಸಿವೆ. ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಪಶ್ಚಿಮ ರಷ್ಯಾದ ಅನೇಕ ವಸತಿ ಕಟ್ಟಡಗಳು ಮತ್ತು ಮೂಲಸೌಕರ್ಯಗಳಿಗೆ ಹಾನಿಯಾಗಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ:

ಮಾಸ್ಕೋ ಪ್ರಾದೇಶಿಕ ಗವರ್ನರ್ ಮಾಹಿತಿ ನೀಡಿದ್ದು, ಖಾಸಗಿ ಮನೆಯೊಂದಕ್ಕೆ ಡ್ರೋನ್ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇನ್ನೊಬ್ಬ ವ್ಯಕ್ತಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಮುಂಜಾನೆ 3 ಗಂಟೆಯಿಂದಲೇ ವಾಯು ರಕ್ಷಣಾ ಪಡೆಗಳು ಡ್ರೋನ್‌ಗಳನ್ನು ತಡೆಹಿಡಿಯಲು ಕಾರ್ಯಾಚರಣೆ ನಡೆಸಿದ್ದವು ಎಂದರು.

ಮಾಸ್ಕೋ ಮೇಯರ್ ಸೆರ್ಗೇ ಸೊಬ್ಯಾನಿನ್ ಅವರ ಪ್ರಕಾರ, ರಾಜಧಾನಿಯಲ್ಲೇ 74 ಡ್ರೋನ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಉಕ್ರೇನ್ ತನ್ನ ದಾಳಿಗಳು ರಷ್ಯಾದ ಮಿಲಿಟರಿ ಮತ್ತು ಇಂಧನ ಮೂಲಸೌಕರ್ಯಗಳನ್ನೇ ಗುರಿಯಾಗಿಸಿಕೊಂಡಿವೆ ಎಂದು ಹೇಳುತ್ತಿದ್ದರೆ, ರಷ್ಯಾ ನಾಗರಿಕ ಪ್ರದೇಶಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಆರೋಪಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !