ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ನಲ್ಲಿರುವ ನಾಗರಿಕರನ್ನು ಸ್ಥಳಾಂತರಿಸುವ ನಿಟ್ಟಿನಲ್ಲಿ ಇಂದು ಬೆಳಗ್ಗೆಯಿಂದ ಉಕ್ರೇನ್ ನ 5 ನಗರಗಳಿಗೆ ರಷ್ಯಾ ಕದನ ವಿರಾಮ ಘೊಷಿಸಿದೆ.
ಈ ಬಗ್ಗೆ ಮಾಹಿತಿ ನೀಡಿದ ರಷ್ಯಾದ ವಿದೇಶಾಂಗ ಸಚಿವಾಲಯ, ಉಕ್ರೇನ್ ನ ಕೀವ್, ಚರ್ನಿಹಿವ್, ಸುಮಿ, ಖಾರ್ಕೀವ್ ಮತ್ತು ಮರಿಯುಪೋಲ್ ನಗರಗಳಲ್ಲಿ ಮಾನವೀಯ ಕಾರಿಡಾರ್ ಗಳನ್ನು ರಚಿಸಲಾಗಿದ್ದು, ಈ 5 ನಗರಗಳಲ್ಲೂ ಕದನವಿರಾಮ ಘೋಷಿಸಲಾಗಿದೆ ಎಂದು ತಿಳಿಸಿದೆ.
ಉಕ್ರೇನಿಯನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರು ಮಾರ್ಚ್ 10ರಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರನ್ನು ಭೇಟಿ ಮಾಡಲಿದ್ದಾರೆ.
ಸೋಮವಾರ ಬೆಲಾರಸ್‌ನಲ್ಲಿ ರಷ್ಯಾ ಮತ್ತು ಉಕ್ರೇನ್ ನಡುವಿನ ಮೂರನೇ ಸುತ್ತಿನ ಮಾತುಕತೆಯ ನಂತರ ಈ ಬೆಳವಣಿಗೆ ಕಂಡು ಬಂದಿದೆ.