ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ಬಿಕ್ಕಟ್ಟನ್ನು ಮಾತುಕತೆ ಹಾಗೂ ರಾಜತಾಂತ್ರಿಕ ಮಾರ್ಗದಿಂದ ಮಾತ್ರವೇ ಶಾಂತಿಯುತವಾಗಿ ಬಗೆಹರಿಸಲು ಸಾಧ್ಯ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ದೋವಲ್ ಹೇಳಿದ್ದಾರೆ.
ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆಯುತ್ತಿಯುವ ಎರಡು ದಿನಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಎಲ್ಲ ರಾಷ್ಟ್ರಗಳ ಸಾರ್ವಭೌಮತೆಯನ್ನು ಗೌರವಿಸಬೇಕು. ಈ ವಿಷಯದಲ್ಲಿ ಯಾವುದೇ ದೇಶಕ್ಕೂ ಯಾವುದೇ ವಿನಾಯಿತಿ ಇರಕೂಡದು’ ಎಂದು ಪ್ರತಿಪಾದಿಸಿದರು.
ಅಮೆರಿಕದ ಭದ್ರತಾ ಸಲಹೆಗಾರ ಜೇಕ್ ಸಲ್ಲೀವನ್, ಚೀನಾದ ವಿಶೇಷ ರಾಯಭಾರಿ (ಯುರೋಪ್-ಏಷ್ಯಾ ವಿಭಾಗ) ಲಿ ಹುಯಿ ಸೇರಿದಂತೆ 40 ದೇಶಗಳ ಭದ್ರತೆ ಅಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಈ ಸಮಾವೇಶದಲ್ಲಿ ಪಾಲ್ಗೊಳ್ಳಲು ರಷ್ಯಾಕ್ಕೆ ಆಹ್ವಾನ ನೀಡಿಲ್ಲ.