ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಕ್ರೇನ್ ಸೇನೆ ಶಸ್ತ್ರಾಸ್ತ್ರ ಕೆಳಗಿಳಿಸಿದರೆ ಅದರೊಂದಿಗೆ ಮಾತುಕತೆಗೆ ತಾವು ಸಿದ್ಧ ಎಂದು ರಷ್ಯಾ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರು ಹೇಳಿದ್ದಾರೆ.
‘ಉಕ್ರೇನ್ನ ಸಶಸ್ತ್ರ ಪಡೆಗಳು ನಮ್ಮ ಕರೆಗೆ ಸ್ಪಂದಿಸಿ ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ ತಕ್ಷಣ ನಾವು ಯಾವುದೇ ಸಮಯದಲ್ಲಿ ಮಾತುಕತೆಗೆ ಸಿದ್ಧರಿದ್ದೇವೆ’ ಎಂದು ಅವರು ಹೇಳಿದರು.
ಉಕ್ರೇನ್ನಲ್ಲಿ ನಾಗರಿಕ ಮೂಲಸೌಕರ್ಯಗಳ ಮೇಲೆ ರಷ್ಯಾ ಮಿಲಿಟರಿ ಕಾರ್ಯಾಚರಣೆ ನಡೆಸುತ್ತಿಲ್ಲ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರು ಹೇಳಿದ್ದಾರೆ.
ರಷ್ಯಾದ ಪುಟಿನ್ ಉಕ್ರೇನ್ನಲ್ಲಿ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸುವಾಗ ಇದು ನಾಗರಿಕರನ್ನು ‘ರಕ್ಷಿಸುವ’ ಉದ್ದೇಶ ಹೊಂದಿದೆ ಎಂದು ಹೇಳಿದ್ದರು.