ಉಕ್ರೇನ್-ರಷ್ಯಾ ಕದನ: ಭಾರತೀಯ ರಾಯಭಾರಿ ಕಚೇರಿ ಪೋಲೆಂಡ್‌ಗೆ ಸ್ಥಳಾಂತರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಯುದ್ಧಪೀಡಿತ ಉಕ್ರೇನ್ ರಷ್ಯಾದ ನಡುವಿನ ಯುದ್ಧ ಭೀಕರತೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಭಾರತೀಯ ರಾಯಭಾರಿ ಕಚೇರಿಯನ್ನು ತಾತ್ಕಾಲಿಕವಾಗಿ ನೆರೆಯ ಪೋಲೆಂಡ್‌ಗೆ ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.
ಉಕ್ರೇನ್‌ನಲ್ಲಿಭದ್ರತಾ ಪರಿಸ್ಥಿತಿ, ದೇಶದ ಪಶ್ಚಿಮ ಭಾಗಗಳಲ್ಲಿ ದಾಳಿಗಳು ದಿನೇ ದಿನೇ ಕ್ಷೀಣಿಸುತ್ತಿದ್ದು, ಈ ಸಂದರ್ಭ ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯನ್ನು ಪೋಲೆಂಡ್‌ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಮುಂದಿನ ಬೆಳವಣಿಗೆಯ ನಂತರ ಪರಿಸ್ಥಿತಿಯನ್ನು ಮರು ಮೌಲ್ಯಮಾಪನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!