ರಷ್ಯಾ ದಾಳಿಗೆ ಉಕ್ರೇನ್‌ ನಲ್ಲಿ ಈವರೆಗೆ 7 ಮಂದಿ ಸಾವು, 9 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಕ್ರೇನ್‌ ವಿರುದ್ಧ ಯುದ್ಧ ಘೋಷಣೆ ಮಾಡಿದ ಬೆನ್ನಲ್ಲೇ ರಷ್ಯಾ ಸೇನಾಪಡೆಗಳು ದಾಳಿ ಪ್ರಾರಂಭಿಸಿದ್ದು, ಇದುವರೆಗೆ ಉಕ್ರೇನ್‌ ನ 7 ಮಂದಿ ಮೃತಪಟ್ಟಿದ್ದು, 9 ಜನ ಗಾಯಗೊಂಡಿದ್ದಾರೆ.
ರಷ್ಯಾ ಸೇನಾ ಪಡೆ ನಡೆಸಿದ ಶೆಲ್‌ ದಾಳಿಗೆ ಕನಿಷ್ಠ 7 ಜನರು ಮೃತಪಟ್ಟಿದ್ದಾರೆ ಎಂದು ಉಕ್ರೇನ್‌ ನ ಆಂತರಿಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಉಕ್ರೇನ್​​ನ ಗಡಿಗಳಾದ ಚೆರ್ನಿಹಿವ್, ಖಾರ್ಕಿವ್ ಮತ್ತು ಲುಹಾನ್ಸ್ಕ್ ಪ್ರದೇಶಗಳಿಗೆ ರಷ್ಯಾ ಕಾಲಿಟ್ಟಿದೆ. ಈ ನಿಟ್ಟಿನಲ್ಲಿ ವಿಶ್ವದ ಎಲ್ಲಾ ಬಲಿಷ್ಠ ರಾಷ್ಟ್ರಗಳು ರಷ್ಯಾದ ಮೇಲೆ ಎಲ್ಲಾ ರೀತಿಯಲ್ಲೂ ನಿರ್ಬಂಧ ಹೇರಬೇಕು ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!