ರಷ್ಯ ಸಾರಿಗೆ ವಿಮಾನ ಹೊಡೆದುರುಳಿಸಿದ ಉಕ್ರೇನ್

ಹೊಸದಿಗಂತ ಡಿಜಿಟಲ್ ಡೆಸ್ಕ್:
ರಷ್ಯ ಮತ್ತು ಉಕ್ರೇನ್ ನಡುವಿನ ಯುದ್ಧ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯದ ಸಾರಿಗೆ ವಿಮಾನವೊಂದನ್ನು ಉಕ್ರೇನ್ ಹೊಡೆದುರುಳಿಸಿದೆ.

ವಿಮಾನ ಐಎಲ್76ನ್ನು ಉಕ್ರೇನ್ ಹೊಡೆದುರುಳಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೀವ್ ನಗರದ ವಾಲಿಸ್ಕಿವ್ ಪಟ್ಟಣದ ಬಳಿ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಸ್ಫೋಟದ ಶಬ್ದಗಳು ಮಿಲಿಟರಿ ನೆಲೆಯಿಂದ ಬರುತ್ತಿವೆ. ರಸ್ತೆ ಮಧ್ಯೆ ಬೆಂಕಿ ಹೊತ್ತಿ ಉರಿಯುತ್ತಿದೆ ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!