January22, 2026
Thursday, January 22, 2026
spot_img

ದೆಹಲಿಯಲ್ಲಿ ಬಾಂಬ್‌ ಸ್ಫೋಟಿಸಿದ್ದು ಉಮರ್‌! ಡಿಎನ್‌ಎ ಪರೀಕ್ಷೆಯಲ್ಲಿ ದೃಢ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಂಪು ಕೋಟೆ ಬಳಿ ಕಾರ್ ಬಾಂಬ್‌ ಸ್ಫೋಟ ಮಾಡಿದ್ದು ಡಾ. ಉಮರ್ ಎನ್ನುವುದು ಅಧಿಕೃತವಾಗಿ ದೃಢಡಪಟ್ಟಿದೆ.

ಐ20 ಕಾರನ್ನು ಚಲಾಯಿಸಿದ ವ್ಯಕ್ತಿ ಉಮರ್‌ ಎಂದು ತನಿಖಾಧಿಕಾರಿಗಳು ಮೊದಲೇ ಶಂಕಿಸಿದ್ದರು. ಹೀಗಿದ್ದರೂ ಮುಂದೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವಾಗ ಮೃತ ವ್ಯಕ್ತಿ ಉಮರ್‌ ಎನ್ನುವುದಕ್ಕೆ ವೈಜ್ಞಾನಿಕ ದಾಖಲೆಯ ಅಗತ್ಯ ಇತ್ತು. ಈ ಕಾರಣಕ್ಕೆ ಪುಲ್ವಾಮಾದಲ್ಲಿರುವ ಉಮರ್‌ ಕುಟುಂಬಸ್ಥರ ಡಿಎನ್‌ಎ ಸಂಗ್ರಹಿಸಲಾಗಿತ್ತು.

ಸ್ಫೋಟದ ನಂತರ  ಉಮರ್‌ ಕಾಲು ಸ್ಟೀರಿಂಗ್ ವೀಲ್ ಮತ್ತು ಆಕ್ಸಿಲರೇಟರ್ ನಡುವೆ ಸಿಲುಕಿಕೊಂಡಿತ್ತು.   ಡಿಎನ್ಎ ಮಾದರಿ ಉಮರ್‌ ತಾಯಿಯ ಮಾದರಿಯೊಂದಿಗೆ ಹೊಂದಿಕೆಯಾಗಿದೆ ಎಂದು ದೆಹಲಿ ಪೊಲೀಸರ ಮೂಲಗಳು ತಿಳಿಸಿವೆ. 

ದೆಹಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಉಮರ್ ನಬಿ ಶ್ರೀನಗರದಿಂದ MBBS ಮತ್ತು MD ಪದವಿಗಳನ್ನು ಪಡೆದು 2023ರಲ್ಲಿ ಕಾಶ್ಮೀರದ ಅನಂತ್‌ನಾಗ್‌ನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಎಸ್‌ಆರ್ ಆಗಿ ಕೆಲಸ ಮಾಡುತ್ತಿದ್ದ.

ಆರಂಭದಿಂದಲೂ ಉಮರ್ ಕೆಲಸ ವಿಷಯದಲ್ಲಿ ಕೆಟ್ಟ ಉದ್ಯೋಗಿಯಾಗಿಯೇ ಕಾಣಿಸಿಕೊಂಡಿದ್ದ. ದಿನೇದಿನೇ ಒಂದಿಲ್ಲೊಂದು ದೂರುಗಳು ಬರುತ್ತಲೇ ಇದ್ದವು. ಸಹ ವೈದ್ಯರು, ಪ್ಯಾರಾಮೆಡಿಕಲ್ ಸಿಬ್ಬಂದಿ ಸೇರಿದಂತೆ ರೋಗಿಗಳು ಕೂಡ ಉಮರ್‌ನ ಅಸಭ್ಯ ಹಾಗೂ ಅಜಾಗರೂಕತೆ ಬಗ್ಗೆ ಆರೋಪಿಸುತ್ತಿದ್ದರು. ಅಲ್ಲದೇ ಉಮರ್ ಕೂಡ ಹೆಚ್ಚಿನ ಸಮಯ ಆಸ್ಪತ್ರೆಗೆ ಗೈರಾಗಿಯೇ ಇರುತ್ತಿದ್ದ.

Must Read