May 28, 2026
Thursday, May 28, 2026
spot_img

ಬಾಗಲಕೋಟೆ ವಶಪಡಿಸಿಕೊಂಡ ಉಮೇಶ್ ಮೇಟಿ: ಫಲಿತಾಂಶದ ಬಗ್ಗೆ ಬಿ.ವೈ.ವಿಜಯೇಂದ್ರ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಡೀ ರಾಜ್ಯದ ಕುತೂಹಲ ಕೆರಳಿಸಿದ್ದ ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ದಾಖಲೆ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿಯ ಅನುಭವಿ ನಾಯಕ ವೀರಣ್ಣ ಚರಂತಿಮಠ ಅವರಿಗೆ ಭಾರಿ ಸೋಲುಂಟಾಗಿದೆ.

ಬಾಗಲಕೋಟೆಯ ಫಲಿತಾಂಶದ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, “ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ನಾವು ಮುಕ್ತವಾಗಿ ಒಪ್ಪಿಕೊಳ್ಳುತ್ತೇವೆ. ಮತದಾರರು ನಮಗೆ ಬೆಂಬಲ ನೀಡಲಿದ್ದಾರೆ ಎಂಬ ವಿಶ್ವಾಸವಿತ್ತು, ಆದರೆ ಫಲಿತಾಂಶ ನಿರೀಕ್ಷಿತವಾಗಿ ಬಂದಿಲ್ಲ,” ಎಂದು ತಿಳಿಸಿದರು.

ಉಪಚುನಾವಣೆಯಲ್ಲಿ ಬಿಜೆಪಿ ಅನುಭವಿಸಿದ ಈ ಹಿನ್ನಡೆಯ ಬಗ್ಗೆ ಪಕ್ಷದ ವೇದಿಕೆಯಲ್ಲಿ ಗಂಭೀರ ಚರ್ಚೆ ನಡೆಸಲಾಗುವುದು. “ಸೋಲಿಗೆ ಕಾರಣಗಳೇನು ಎಂಬ ಬಗ್ಗೆ ಪರಾಮರ್ಶೆ ನಡೆಸುತ್ತೇವೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಯಾವ ರೀತಿ ಸಂಘಟಿಸಬೇಕು ಮತ್ತು ಬಲಪಡಿಸಬೇಕು ಎಂಬ ಕುರಿತು ಹಿರಿಯ ನಾಯಕರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ,” ಎಂದು ವಿಜಯೇಂದ್ರ ಹೇಳಿದರು.

ಉಪಚುನಾವಣೆಗಳ ಇತಿಹಾಸವನ್ನು ಸ್ಮರಿಸಿದ ವಿಜಯೇಂದ್ರ, ಮುಂದಿನ ದಿನಗಳಲ್ಲಿ ಸಂಘಟನಾತ್ಮಕವಾಗಿ ಪಕ್ಷವನ್ನು ಕಟ್ಟಿ ಬೆಳೆಸುವ ಭರವಸೆಯನ್ನು ಕಾರ್ಯಕರ್ತರಿಗೆ ನೀಡಿದ್ದಾರೆ. ಸದ್ಯ ಉಮೇಶ್ ಮೇಟಿ ಅವರ ಗೆಲುವಿನಿಂದ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !