Friday, March 31, 2023

Latest Posts

ಉಮೇಶ್ ಪಾಲ್ ಹತ್ಯೆ ಪ್ರಕರಣ : ಆರೋಪಿಯನ್ನು ಎನ್‌ಕೌಂಟರ್‌ನಲ್ಲಿ ಗುಂಡಿಕ್ಕಿ ಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ಉತ್ತರ ಪ್ರದೇಶದ ಬಿಎಸ್‌ಪಿ ಶಾಸಕ ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಶೂಟರ್‌ನನ್ನು ಸೋಮವಾರ ಬೆಳಗ್ಗೆ ಪ್ರಯಾಗ್‌ರಾಜ್‌ನ ಕೌಂಧಿಯಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವಿಜಯ್ ಕುಮಾರ್ ಅಲಿಯಾಸ್ ಉಸ್ಮಾನ್ ಚೌಧರಿಯನ್ನು ಎನ್​ಕೌಂಟರ್​ನಲ್ಲಿ ಹತ್ಯೆಗೈಯಲಾಗಿದೆ, ಉಮೇಶ್​ ಪಾಲ್​ಗೆ ಮೊದಲು ಗುಂಡು ಹಾರಿಸಿದ್ದು ಈತನೇ ಎಂದು ಹೇಳಲಾಗುತ್ತಿದೆ.

2005ರ ಬಹುಜನ ಸಮಾಜ ಪಕ್ಷದ (BSP) ಶಾಸಕ ರಾಜು ಪಾಲ್ ಅವರ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್ ಪಾಲ್ ಅವರನ್ನು ಫೆಬ್ರವರಿ 24,2023 ರಂದು ಪ್ರಯಾಗರಾಜ್‌ನಲ್ಲಿರುವ ಅವರ ನಿವಾಸದಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು. ಉತ್ತರ ಪ್ರದೇಶ ಪೊಲೀಸರು ಮಾಫಿಯಾ-ರಾಜಕಾರಣಿ ಅತೀಕ್ ಸೇರಿದಂತೆ ನಾಲ್ವರು ದಾಳಿಕೋರ -ಅಹ್ಮದ್ ಅವರ ಮಗ, ಅಸದ್, ಗುಲಾಮ್, ಗುಡ್ಡು ಮತ್ತು ಸಬೀರ್ ಎಂದು ಗುರುತಿಸಿದ್ದಾರೆ.

ಫೆಬ್ರವರಿ 27 ರಂದು ಪ್ರಯಾಗ್‌ರಾಜ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಕೊಲೆಯಲ್ಲಿ ಭಾಗಿಯಾದ ಆರೋಪಿಗಳಲ್ಲಿ ಒಬ್ಬನನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದರು. ಧೂಮಂಗಂಜ್ ಪೊಲೀಸ್ ವ್ಯಾಪ್ತಿಯ ನೆಹರು ಪಾರ್ಕ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಆರೋಪಿ ಅರ್ಬಾಜ್ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ಭಾನುವಾರ ಉತ್ತರ ಪ್ರದೇಶ ಪೊಲೀಸರು ಉಮೇಶ್ ಪಾಲ್ ಹತ್ಯೆಯಲ್ಲಿ ಭಾಗಿಯಾಗಿರುವ ಐದು ಜನರ ಬಗ್ಗೆ ಯಾವುದೇ ಮಾಹಿತಿ ನೀಡಿದವರಿಗೆ 2.5 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!