Sunday, March 26, 2023

Latest Posts

ಉಮೇಶ್ ಪಾಲ್‌ ಹತ್ಯೆ ಆರೋಪಿ ಅರ್ಬಾಜ್‌ ನನ್ನು ಎನ್‌ಕೌಂಟರ್ ಮಾಡಿದ ಯುಪಿ ಪೊಲೀಸರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಎಸ್‌ಪಿ ಶಾಸಕ ರಾಜು ಪಾಲ್‌ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಹತ್ಯೆಯ ಆರೋಪಿ ಅರ್ಬಾಜ್‌ ಖಾನ್‌ನನ್ನು ಪ್ರಯಾಗರಾಜ್‌ನಲ್ಲಿ ಪೊಲೀಸರು ಎನ್‌ಕೌಂಟರ್‌ ಮಾಡಿದ್ದಾರೆ.

ಉಮೇಶ್‌ ಪಾಲ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಯಾಗರಾಜ್‌ನ ಧೂಮನ್‌ಗಂಜ್‌ ಪ್ರದೇಶದಲ್ಲಿರುವ ನೆಹರು ಪಾರ್ಕ್‌ನಲ್ಲಿ ಎನ್‌ಕೌಂಟರ್‌ ಮಾಡಿದ್ದಾರೆ. ಅರ್ಬಾಜ್‌ ಖಾನ್‌ ಇರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ನೆಹರು ಪಾರ್ಕ್‌ನಲ್ಲಿ ಶೋಧ ನಡೆಸಿದ್ದಾರೆ. ಇದೇ ವೇಳೆ ಎನ್‌ಕೌಂಟರ್‌ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಬಿಎಸ್‌ಪಿ ಶಾಸಕ ರಾಜು ಪಾಲ್‌ ಅವರನ್ನು 2005 ರಲ್ಲಿ ಕೊಲೆ ಮಾಡಲಾಗಿತ್ತು. ಕೊಲೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್‌ ಪಾಲ್‌ ಅವರನ್ನು ಕಳೆದ ಫೆಬ್ರವರಿ 24 ರಂದು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ರಾಜು ಪಾಲ್‌ ಕೊಲೆ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಮಾಜಿ ಸಂಸದ ಆತಿಕ್‌ ಅಹ್ಮದ್‌ನನ್ನು ಬಂಧಿಸಿದ್ದು, ಸದ್ಯ ಅವರು ಜೈಲಿನಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!