ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತುರ್ತಾಗಿ ಸಭೆ ಸೇರಲಿದೆ. ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿಯ ಕುರಿತು ಭಾನುವಾರ ಮಧ್ಯಾಹ್ನ 3ಗಂಟೆಗೆ ʻಕ್ಲೋಸ್ಡ್ ಡೋರ್ ಸೆಷನ್ʼ ನಡೆಸಲಿದೆ ಎಂದು ಯುಎನ್ ವೆಬ್‌ಸೈಟ್ ತಿಳಿಸಿದೆ.
ಶನಿವಾರ ಹಮಾಸ್ ಉಗ್ರರು ನಡೆಸಿದ ದಾಳಿಯಿಂದಾಗಿ ಇಸ್ರೇಲಿ ನಗರಗಳು ಮತ್ತು ಪಟ್ಟಣಗಳು ತೀವ್ರವಾಗಿ ನಾಶವಾದವು. ಇಸ್ರೇಲಿ ನಾಗರಿಕರು ಮತ್ತು ಸೇನೆಯ ಕೆಲವು ಸದಸ್ಯರನ್ನು ಒತ್ತೆಯಾಳಾಗಿ ತೆಗೆದುಕೊಂಡು ಗಾಜಾ ಪಟ್ಟಿಗೆ ಕರೆದೊಯ್ಯಲಾಯಿತು.
ಹಮಾಸ್ ದಾಳಿಯಿಂದಾಗಿ ಇದುವರೆಗೆ 300 ಇಸ್ರೇಲಿಗಳು ಸಾವನ್ನಪ್ಪಿದ್ದಾರೆ. ಪ್ರತೀಕಾರವಾಗಿ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 232 ಜನರು ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ. ಹಮಾಸ್ ನೆಲೆಗಳು ಮತ್ತು ಅವರಿಗೆ ನೆರವು ನೀಡಿದವರನ್ನು ಗುರಿಯಾಗಿಸಿಕೊಂಡು ಇಸ್ರೇಲ್ ವೈಮಾನಿಕ ದಾಳಿ ನಡೆಸುತ್ತಿದೆ. ಹಮಾಸ್ ಉಗ್ರಗಾಮಿಗಳಿಗೆ ಆಶ್ರಯ ನೀಡಿರುವ ಗಾಜಾ ನಗರವನ್ನು ನಾಶಪಡಿಸದೆ ಸುಮ್ಮನೆ ಬಿಡುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಎಚ್ಚರಿಸಿದ್ದಾರೆ.