ಪತ್ನಿಯ ಕಾಟ ತಾಳಲಾಗುತ್ತಿಲ್ಲ, ಡೆತ್‌ನೋಟ್‌ ಬರೆದಿಟ್ಟು ಪ್ರಾಣಬಿಟ್ಟ ಪತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪತ್ನಿ ಕಿರುಕುಳ ತಾಳಲಾರದೆ ಡೆತ್​ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿನಗರದಲ್ಲಿ ನಡೆದಿದೆ.

ಪತ್ನಿ ಕಿರುಕುಳದಿಂದ ಬೇಸತ್ತು ಸಾಯಿಸುತ್ತಿದ್ದೇನೆಂದು ಪೀಟರ್ ಎನ್ನುವಾತ ಡೆತ್​ನೋಟ್​ ಬರೆದಿಟ್ಟು ಬಳಿಕ ನೇಣಿಗೆ ಶರಣಾಗಿದ್ದಾರೆ. ಕೆಲ ದಿನಗಳಿಂದ ಪತಿ ಪೀಟರ್​, ಪತ್ನಿ ಪಿಂಕಿ ನಡುವೆ ಜಗಳವಾಗುತ್ತಿತ್ತು. ಇದರಿಂದ ಬೇಸತ್ತು ಪೀಟರ್​ ಪ್ರಾಣ ಕಳೆದುಕೊಂಡಿದ್ದಾರೆ. ವಿಚ್ಚೇದನ ಅರ್ಜಿ ಇಂದು(ಜನವರಿ 27) ಕೋರ್ಟ್​ನಲ್ಲಿ ವಿಚಾರಣೆ ದಿನವೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಹೆಂಡತಿ ಟಾರ್ಚರ್ ನಿಂದ ನಾನು ಸಾಯುತ್ತಿದ್ದೇನೆ ಎಂದು ಡೆತ್​ನೋಟ್ ಬರೆದಿಟ್ಟು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಡ್ಯಾಡಿ ಆಯಮ್ ಸಾರಿ. ಪಿಂಕಿ ಈಸ್ ಕಿಲ್ಲಿಂಗ್ ಮೀ, ಶಿ ವಾಂಟ್ಸ್ ಮೈ ಡೆಥ್ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇನ್ನು ಪೀಟರ್ ಸಂಬಂಧಿಕರು, ಶವ ಸಂಸ್ಕಾರ ಪೆಟ್ಟಿಗೆ ಮೇಲೆ ಹೆಂಡತಿ ಕಾಟ ತಾಳಲಾರದೆ ಸತ್ತನು ಎಂದು ಬರೆದಿದ್ದಾರೆ.

ಪಿಂಕಿ ಖಾಸಗಿ ಶಾಲೆ‌‌ ಶಿಕ್ಷಕಿಯಾಗಿದ್ದು, ಇತ್ತೀಚಿಗೆ ಬೇರೆ ವ್ಯಕ್ತಿ ‌ಜೊತೆಗೆ ಸುತ್ತಾಟ ನಡೆಸುತ್ತಿದ್ದಳು ಇದನ್ನು ಪೀಟರ್ ಮತ್ತು ಕುಟುಂಬಸ್ಥರು ಪ್ರಶ್ನೆ ಮಾಡಿದ್ದರು. ಆದ್ರೆ, ಇದಕ್ಕೆ ಪಿಂಕಿ, ನನ್ನ ಜೀವನ ನನ್ನಿಷ್ಟ ಎಂದಿದ್ದಳು. ಅಲ್ಲದೆ ಇತ್ತೀಚೆಗೆ ಪಿಂಕಿ ಹಲವಾರು ತಿಂಗಳು ಗಂಡನಿಂದ ದೂರವಾಗಿ ವಿಚ್ಚೇದನಕ್ಕೆ ಅರ್ಜಿ ಹಾಕಿದ್ದಳು. ಇಂದು(ಜನವರಿ 27) ಈ ಬಗ್ಗೆ ಕೋರ್ಟ್ ನಲ್ಲಿ ವಿಚಾರಣೆ ಇತ್ತು. ಆದ್ರೆ, ವಿಚ್ಚೇದನಕ್ಕೆ 20 ಲಕ್ಷ ರೂ. ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದ್ದು, ಇದರಿಂದ ಪೀಟರ್ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!