ಹೊಸದಿಗಂತ ಡಿಜಿಟಲ್ ಡೆಸ್ಕ್:
ದೀರ್ಘಕಾಲದ ಹೊಟ್ಟೆ ನೋವಿನಿಂದ ಬೇಸತ್ತ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಕೊಳ್ಳೇಗಾಲ ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ನಡೆದಿದೆ.
ಪ್ರಿಯಾಂಕ ಆತ್ಮಹತ್ಯೆಗೆ ಶರಣಾದ ಯುವತಿ. ಈಕೆ ಅಂತಿಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ಪ್ರಿಯಾಂಕ ಕಳೆದ ಕೆಲವು ಸಮಯದಿಂದ ತೀವ್ರವಾದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದರೂ ಸಹ, ತನ್ನ ದೈಹಿಕ ನೋವಿನಿಂದ ಬೇಸತ್ತು ಪ್ರಿಯಾಂಕ ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ಹೇಳಲಾಗಿದೆ.
ಯುವತಿಯ ಸಾವಿನ ಸುದ್ದಿ ಕೇಳಿ ಕುಟುಂಬದವರು ಮತ್ತು ಗ್ರಾಮಸ್ಥರು ಆಘಾತಕ್ಕೊಳಗಾಗಿದ್ದಾರೆ.
ಈ ದುರ್ಘಟನೆಯ ಸಂಬಂಧ ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮತ್ತು ಕಾರಣಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

